ಸಚಿನ್ ಕ್ರಿಕೆಟ್‌ಗೆ ಪಾದಾರ್ಪಣೆ ಹಾಗೂ ವಿದಾಯದ ದಿನದಂದೇ ದಾಖಲೆ ಮುರಿದ ಕೊಹ್ಲಿ ಮುಂಬೈ: ನವೆಂಬರ್ 15 - ಇದು ಕ್ರಿಕೆಟ್ ಅಭಿಮಾನಿಗಳ ಪಾಲಿಗೆ ಮರೆಯಲಾಗದ ದಿನಾಂಕ. 'ಕ್ರಿಕೆಟ್ ದೇವರು' ಎಂದೇ ಕ್ರಿಕೆಟ್ ಅಭಿಮಾನಿಗಳಿಂದ ಆರಾಧಿಸಲ್ಪಡುವ ಸಚಿನ್ ತೆಂಡೂಲ್ಕರ್ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮತ್ತು ವಿದಾಯ ಹಾಡಿರುವ ದಿನದಂದೇ ಕ್ರಿಕೆಟ್ ದಿಗ್ಗಜನ ದಾಖಲೆಯನ್ನು ವಿರಾಟ್ ಕೊಹ್ಲಿ ಮುರಿದಿದ್ದಾರೆ. 1989ನೇ ಇಸವಿಯ ನವೆಂಬರ್ 15ರಂದು ಕರಾಚಿಯಲ್ಲಿ ಪಾಕಿಸ್ತಾನ ವಿರುದ್ಧ ಸಚಿನ್ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಕಾಲಿಟ್ಟಿದ್ದರು. ಅಂದು ಅವರಿಗೆ 16 ವರ್ಷವಾಗಿತ್ತು. 24 ವರ್ಷಗಳ ಸುದೀರ್ಘ ಕ್ರಿಕೆಟ್ ಜೀವನದ ಬಳಿಕ ಸಚಿನ್, 2013ರ ನವೆಂಬರ್ 15ರಂದೇ ಮುಂಬೈನ ವಾಂಖೆಡೆ ಮೈದಾನದಲ್ಲಿ ಕೊನೆಯ ಅಂತರರಾಷ್ಟ್ರೀಯ ಪಂದ್ಯವನ್ನು ಆಡಿದ್ದರು. 🗓️ # 1989 🤝 2013 @sachin_rt # 24 , ! 👏🏻👏🏻 ../ ಈಗ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಘೋಷಿಸಿದ 10 ವರ್ಷಗಳ ಬಳಿಕ ಮತ್ತದೇ ವಾಂಖೆಡೆ ಮೈದಾನದಲ್ಲಿ ಸಚಿನ್ ಅವರ ದಾಖಲೆಯನ್ನು ಕೊಹ್ಲಿ ಮುರಿದಿದ್ದಾರೆ. ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ನ್ಯೂಜಿಲೆಂಡ್ ವಿರುದ್ಧ ನಡೆಯುತ್ತಿರುವ ಸೆಮಿಫೈನಲ್ ಪಂದ್ಯದಲ್ಲಿ ಕೊಹ್ಲಿ, ಏಕದಿನ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಶತಕಗಳ ಅರ್ಧಶತಕದ ಐತಿಹಾಸಿಕ ದಾಖಲೆ ಬರೆದಿದ್ದಾರೆ. ಆ ಮೂಲಕ ಸಚಿನ್ ಹೆಸರಲ್ಲಿದ್ದ ದಾಖಲೆಯನ್ನು (49 ಶತಕ) ಮುರಿದಿದ್ದಾರೆ. ಸಚಿನ್ ತವರು ಮೈದಾನದಲ್ಲೇ ವಿರಾಟ್ ಸ್ಮರಣೀಯ ಸಾಧನೆ ಮಾಡಿದ್ದಾರೆ. ಒಟ್ಟಿನಲ್ಲಿ ನವೆಂಬರ್ 15 ಕ್ರಿಕೆಟ್ ಅಭಿಮಾನಿಗಳ ಪಾಲಿಗೆ ಮರೆಯಲಾಗದ ದಿನವಾಗಿ ಮಾರ್ಪಾಟ್ಟಿದೆ. 15, 2013: 15, 2023: 50th ✨ ../ ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.