: ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ ಬೆಂಗಳೂರು: ಇಲ್ಲಿ ನಡೆಯುತ್ತಿರುವ ನೆದರ್ಲೆಂಡ್ಸ್ ವಿರುದ್ಧದ ಏಕದಿನ ವಿಶ್ವಕಪ್ ಕ್ರಿಕೆಟ್ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. 11 ಓವರ್ ಅಂತ್ಯಕ್ಕೆ ಭಾರತ ತಂಡ ಯಾವುದೇ ವಿಕೆಟ್ ನಷ್ಟವಿಲ್ಲದೆ 95 ರನ್ ಗಳಿಸಿತ್ತು. ಎಂಟಕ್ಕೆ ಎಂಟೂ ಪಂದ್ಯಗಳನ್ನು ಗೆದ್ದು ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಭಾರತ ತಂಡ, ಸೆಮಿಫೈನಲ್‌ನಲ್ಲಿ ಸ್ಥಾನ ಪಡೆದಿದೆ. ಎರಡು ಪಂದ್ಯ ಗೆದ್ದು ಆರರಲ್ಲಿ ಸೋತಿರುವ ನೆದರ್ಲೆಂಡ್ಸ್ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಹೀಗಾಗಿ, ಈ ಪಂದ್ಯವು ಔಪಚಾರಿಕವಾಗಿ ಉಳಿದಿದೆ. ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಏಕದಿನ ಕ್ರಿಕೆಟ್‌ನ 49ನೇ ಶತಕ ಸಿಡಿಸಿದ ಕೊಹ್ಲಿ, ಸಚಿನ್ ಹೆಸರಿನಲ್ಲಿದ್ದ ಏಕದಿನ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಶತಕಗಳ ದಾಖಲೆಯನ್ನು ಸರಿಗಟ್ಟಿದ್ದರು. ಇಂದು ಶತಕಗಳ ಅರ್ಧಶತಕ ದಾಖಲಿಸುವ ಮೂಲಕ ದಾಖಲೆ ಮುರಿಯುತ್ತಾರಾ? ಎಂಬ ಕುತೂಹಲ ಮನೆ ಮಾಡಿದೆ. ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆ.ಎಲ್. ರಾಹುಲ್, ಸೂರ್ಯ ಕುಮಾರ್ ಯಾದವ್, ರವೀಂದ್ರ ಜಡೇಜ, ಮೊಹಮ್ಮದ್ ಶಮಿ, ಜಸ್‌ಪ್ರೀತ್ ಬೂಮ್ರಾ, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್ ನೆದರ್ಲೆಂಡ್ಸ್: ಮ್ಯಾಕ್ಸ್ ಒ ಡೌಡ್, ವೆಸ್ಲಿ ಬ್ಯಾರೆಸಿ, ಕಾಲಿನ್ ಅಕರ್ಮನ್, ಸಿಬ್ರಾಂಡ್ ಎಂಗೆಲ್ಬ್ರೆಕ್ಟ್, ಸ್ಕಾಟ್ ಎಡ್ವರ್ಡ್ಸ್ (ನಾಯಕ), ಬಾಸ್ ಡಿ ಲೀಡ್, ತೇಜ ನಿಡಮನೂರು, ಲೋಗನ್ ವ್ಯಾನ್ ಬೀಕ್, ರೋಲೋಫ್ ವ್ಯಾನ್, ಆರ್ಯನ್ ದತ್, ಪಾಲ್ ವ್ಯಾನ್ ಮೀಕೆರೆನ್ ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.