2023: ಬಾಂಗ್ಲಾಗೆ 230 ರನ್‌ಗಳ ಗೆಲುವಿನ ಗುರಿ ನೀಡಿದ ನೆದರ್ಲೆಂಡ್ಸ್‌ ಕೋಲ್ಕತ್ತ: ಬಾಂಗ್ಲಾದೇಶ ಮತ್ತು ನೆದರ್ಲೆಂಡ್ಸ್‌ ತಂಡಗಳು ಇಂದು ನಡೆಯುತ್ತಿರುವ ವಿಶ್ವಕಪ್ ಟೂರ್ನಿಯ ಪಂದ್ಯದಲ್ಲಿ ಮುಖಾಮುಖಿಯಾಗಿವೆ. ನೆದರ್ಲೆಂಡ್ಸ್‌ ತಂಡ ಬಾಂಗ್ಲಾದೇಶ ಗೆಲ್ಲಲು 230 ರನ್‌ಗಳ ಗೆಲುವಿನ ಗುರಿ ನೀಡಿದೆ. ಇಲ್ಲಿನ ಈಡನ್‌ ಗಾರ್ಡನ್ಸ್‌ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಬಾಂಗ್ಲಾ ವಿರುದ್ಧ ಟಾಸ್‌ ಗೆದ್ದಿರುವ ನೆದರ್ಲೆಂಡ್ಸ್‌, ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ☝️ ’ 🏏 230 . 📝⬇️#CWC23 #://./MZNJmof9zN ನಿಗದಿತ 50 ಓವರ್‌ಗಳಲ್ಲಿ ಎಲ್ಲಾ ವಿಕೆಟ್‌ ಕಳೆದುಕೊಂಡು 229 ರನ್‌ಗಳಿಸಿತು. ನಾಯಕ ಸ್ಕಾಟ್‌ ಎಡ್ವರ್ಡ್‌ 68 ರನ್‌ಗಳಿಸಿ ಗಮನ ಸೆಳೆದರು. ಟೂರ್ನಿಯಲ್ಲಿ ಎರಡೂ ತಂಡಗಳು ಐದು ಪಂದ್ಯಗಳಲ್ಲಿ ಒಂದನ್ನು ಮಾತ್ರ ಗೆದ್ದಿದ್ದು ನಿರ್ಗಮನದ ಹಾದಿಯಲ್ಲಿವೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.