2023: ಭಾರತ ತಂಡವನ್ನು ತಡೆಯುವುದು ಅಸಾಧ್ಯ: ಪ್ರಧಾನಿ ಮೋದಿ ನವದೆಹಲಿ: ಶ್ರೀಲಂಕಾ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ ಭಾರತ ಕ್ರಿಕೆಟ್ ತಂಡಕ್ಕೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ಈ ವಿಶ್ವಕಪ್‌ನಲ್ಲಿ ಭಾರತವನ್ನು ತಡೆಯಲು ಸಾಧ್ಯವಿಲ್ಲ ಎಂದು ಬಣ್ಣಿಸಿದ್ದಾರೆ. ಮೊಹಮ್ಮದ್ ಶಮಿ ಮತ್ತು ಮೊಹಮ್ಮದ್ ಸಿರಾಜ್ ಅವರ ವೇಗದ ಬೌಲಿಂಗ್ ಪ್ರದರ್ಶನದಿಂದ ದ್ವೀಪರಾಷ್ಟ್ರ ತಂಡವನ್ನು ದಾಖಲೆಯ 302 ರನ್‌ಗಳ ಅಂತರಗಳಿಂದ ಮಣಿಸಿತು. ಆ ಮೂಲಕ 2023ರ ವಿಶ್ವಕಪ್‌ನ ಸೆಮಿಫೈನಲ್‌ ಹಂತಕ್ಕೆ ಭಾರತ ಪ್ರವೇಶಿಸಿತು. ! ! . ಮೈಕ್ರೊ ಬ್ಲಾಗಿಂಗ್ ತಾಣ ಎಕ್ಸ್‌ನ ತಮ್ಮ ಖಾತೆಯಲ್ಲಿ ಈ ಸಂತಸವನ್ನು ಹಂಚಿಕೊಂಡಿರುವ ಪ್ರಧಾನಿ ಮೋದಿ, ‘ಶ್ರೀಲಂಕಾ ವಿರುದ್ಧದ ಅದ್ಭುತ ವಿಜಯದ ಮೂಲಕ ಭಾರತದ ಆಟಗಾರರು ಒಂದು ತಂಡವಾಗಿ ಹಾಗೂ ಅತ್ಯಂತ ದೃಢತೆಯಿಂದ ಆಡಿದ್ದಾರೆ. ಭಾರತ ತಂಡಕ್ಕೆ ಅಭಿನಂದನೆಗಳು’ ಎಂದಿದ್ದಾರೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.