: ಬಾಂಗ್ಲಾಗೆ 383 ರನ್‌ಗಳ ಗೆಲುವಿನ ಗುರಿ ನೀಡಿದ ದಕ್ಷಿಣ ಆಫ್ರಿಕಾ ಮುಂಬೈ: ಈ ಬಾರಿಯ ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ರನ್‌ಗಳ ಪ್ರವಾಹವನ್ನೇ ಹರಿಸುತ್ತಿರುವ ದಕ್ಷಿಣ ಆಫ್ರಿಕಾ ತಂಡವು ಬಾಂಗ್ಲಾದೇಶದ ವಿರುದ್ಧ 382 ರನ್‌ ಪೇರಿಸಿದೆ. ಟಾಸ್‌ ಗೆದ್ದು ಬ್ಯಾಟಿಂಗ್‌ ಮಾಡಿದ ದಕ್ಷಿಣ ಆಫ್ರಿಕಾ ನಿಗದಿತ 50 ಓವರ್‌ಗಳಲ್ಲಿ 5 ವಿಕೆಟ್‌ ಕಳೆದಕೊಂಡು 382 ರನ್‌ ಪೇರಿಸಿತು. ಈ ಪಂದ್ಯವನ್ನು ಬಾಂಗ್ಲಾ ದೇಶ ಗೆಲ್ಲಬೇಕಾದರೆ 383 ರನ್‌ಗಳಿಸಬೇಕಿದೆ. #CWC23 👊@ 🏏# ../XFs51XiVBp ಅಗ್ರ ಮತ್ತು ಮಧ್ಯಮ ಕ್ರಮಾಂಕದ ಬ್ಯಾಟರ್‌ಗಳು ಸಿಡಿಲಬ್ಬರದ ಬ್ಯಾಟಿಂಗ್‌ನಿಂದ ದಕ್ಷಿಣ ಆಫ್ರಿಕಾ ಬೃಹತ್‌ ಮೊತ್ತ ಪೇರಿಸಲು ಸಾಧ್ಯವಾಯಿತು. ಕ್ವಿಂಟನ್ ಡಿಕಾಕ್ 174, ಏಡನ್ ಮರ್ಕರಂ 60, ಹೆನ್ರಿಚ್ ಕ್ಲಾಸೆನ್ 90 ರನ್‌ ಬಾರಿಸಿದರು. ಬಾಂಗ್ಲಾ ಪರ ಹಸನ್ ಮೆಹಮೂದ 2 ವಿಕೆಟ್‌ ಪಡೆದರೆ, ಶೊರಿಫುಲ್ ಇಸ್ಲಾಂ, ಮೆಹದಿ ಹಸನ್ ಮಿರಾಜ್, ಶಕೀಬ್ ಅಲ್ ಹಸನ್ ತಲಾ ಒಂದು ವಿಕೆಟ್‌ ಪಡೆದರು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.