: ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಬಿರುಗಾಳಿಯಾದ ಶಮಿಗೆ 5 ವಿಕೆಟ್‌ ಧರ್ಮಶಾಲಾ: ಇಲ್ಲಿ ನ್ಯೂಜಿಲೆಂಡ್ ವಿರುದ್ಧ ನಡೆಯುತ್ತಿರುವ ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಭಾರತದ ವೇಗಿ ಮೊಹಮ್ಮದ್ ಶಮಿ ಬಿರುಗಾಳಿಯಾದರು. ಈ ಪಂದ್ಯದಲ್ಲಿ ಶಮಿ ಮಾರಕ ದಾಳಿ ನಡೆಸುವ ಮೂಲಕ ನ್ಯೂಜಿಲೆಂಡ್‌ನ 5 ವಿಕೆಟ್‌ ಕಿತ್ತರು. 𝙎𝙥𝙚𝙘𝙩𝙖𝙘𝙪𝙡𝙖𝙧 𝙎𝙝𝙖𝙢𝙞! . . 🫡# | #CWC23 | # | # ../EbD3trrkku ಟಾಸ್ ಗೆದ್ದ ಟೀಮ್ ಇಂಡಿಯಾ ಮೊದಲು ಫೀಲ್ಡಿಂಗ್ ಆಯ್ದುಕೊಂಡಿತು. ಮೊದಲು ಬ್ಯಾಟ್‌ ಮಾಡಿದ ನ್ಯೂಜಿಲೆಂಡ್ 50 ಓವರ್‌ಗಳಲ್ಲಿ ಎಲ್ಲಾ ವಿಕೆಟ್‌ ಕಳೆದುಕೊಂಡು 273 ರನ್‌ಗಳಿಸಿತು. ಈ ಪಂದ್ಯದಲ್ಲಿ ವೇಗಿ ಮೊಹಮ್ಮದ್ ಶಮಿ 5 ವಿಕೆಟ್‌ಗಳನ್ನು ಪಡೆಯುವ ಮೂಲಕ ನ್ಯೂಜಿಲೆಂಡ್ ರನ್‌ಗಳಿಕೆಗೆ ಕಡಿವಾಣ ಹಾಕಿದರು. ವಿಲ್ ಯಂಗ್, ರಚಿನ್ ರವೀಂದ್ರ, ಡ್ಯಾರಿಯಲ್ ಮಿಚೆಲ್, ಮಿಚೆಲ್ ಸ್ಯಾಂಟನರ್, ಮ್ಯಾಟ್ ಹೆನ್ರಿ ಅವರ ವಿಕೆಟ್‌ಗಳನ್ನು ಪಡೆದರು. ಮೊದಲು ಬ್ಯಾಟ್‌ ಮಾಡಿದ ನ್ಯೂಜಿಲೆಂಡ್ 50 ಓವರ್‌ಗಳಲ್ಲಿ ಎಲ್ಲಾ ವಿಕೆಟ್‌ ಕಳೆದುಕೊಂಡು 273 ರನ್‌ಗಳಿಸಿತು. ಡ್ಯಾರಿಯಲ್ ಮಿಚೆಲ್ 130 ರನ್‌ಗಳಿಸಿದರು. ರಚಿನ್ ರವೀಂದ್ರ ಉತ್ತಮ ಪ್ರದರ್ಶನ ನೀಡುವ ಮೂಲಕ 75 ರನ್‌ ಗಳಿಸಿದರು. ಭಾರತದ ಪರ ಮೊಹಮ್ಮದ್ ಶಮಿ 5, ಕುಲದೀಪ್‌ ಯಾದವ್ 2 ವಿಕೆಟ್‌ ಪಡೆದರು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.