: ಕ್ಯಾಚ್‌ ಕೈ ಚೆಲ್ಲಿದ ಜಡೇಜ, ನಿರಾಶೆಗೊಂಡ ಪತ್ನಿ ಧರ್ಮಶಾಲಾ: ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ನ್ಯೂಜಿಲೆಂಡ್ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಮೊದಲು ಫೀಲ್ಡಿಂಗ್ ಆಯ್ದುಕೊಂಡಿತ್ತು. ಧರ್ಮಶಾಲಾದ ಮೈದಾನದಲ್ಲಿ ಪಂದ್ಯ ನಡೆಯುತ್ತಿದೆ. ಈ ವೇಳೆ ಅಲ್‌ರೌಂಡರ್‌ ರವೀಂದ್ರ ಜಡೇಜ ಅವರು ಕ್ಯಾಚ್‌ ಅನ್ನು ಕೈ ಚೆಲ್ಲಿದ್ದಾರೆ. ಇದಕ್ಕೆ ಅಭಿಮಾನಿಗಳು ಸೇರಿದಂತೆ ಕ್ರೀಡಾಂಗಣದಲ್ಲಿ ಪಂದ್ಯ ವೀಕ್ಷಿಸುತ್ತಿದ್ದ ಜಡೇಜ ಅವರ ಪತ್ನಿ ರಿವಾಬಾ ಕೂಡ ನಿರಾಶೆಯಾದ ದೃಶ್ಯಗಳು ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. (@) 11ನೇ ಓವರ್‌ನಲ್ಲಿ ಮೊಹಮ್ಮದ್ ಶಮಿ ಬೌಲಿಂಗ್‌ ಮಾಡುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಮೊದಲು ಬ್ಯಾಟ್‌ ಮಾಡಿದ ನ್ಯೂಜಿಲೆಂಡ್ 50 ಓವರ್‌ಗಳಲ್ಲಿ ಎಲ್ಲಾ ವಿಕೆಟ್‌ ಕಳೆದುಕೊಂಡು 273 ರನ್‌ ಗಳಿಸಿತು. ಡ್ಯಾರಿಯಲ್ ಮಿಚೆಲ್ 130 ರನ್‌ಗಳಿಸಿದರು. ರಚಿನ್ ರವೀಂದ್ರ ಉತ್ತಮ ಪ್ರದರ್ಶನ ನೀಡುವ ಮೂಲಕ 75 ರನ್‌ ಗಳಿಸಿದರು. ಭಾರತದ ಪರ ಮೊಹಮ್ಮದ್ ಶಮಿ 5, ಕುಲದೀಪ್‌ ಯಾದವ್ 2 ವಿಕೆಟ್‌ ಪಡೆದರು. ಗಾಯಾಳು ಹಾರ್ದಿಕ್ ಪಾಂಡ್ಯ ಹಾಗೂ ಶಾರ್ದೂಲ್ ಠಾಕೂರ್ ಬದಲಿಗೆ ಮೊಹಮ್ಮದ್ ಶಮಿ ಹಾಗೂ ಸೂರ್ಯಕುಮಾರ್ ಯಾದವ್‌ ಆಡುತ್ತಿದ್ದಾರೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.