: ಶಮಿ, ಸೂರ್ಯಗೆ ಅವಕಾಶ; ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆಯ್ಕೆ ಧರ್ಮಶಾಲಾ: ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ನ್ಯೂಜಿಲೆಂಡ್ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಮೊದಲು ಫೀಲ್ಡಿಂಗ್ ಆಯ್ದುಕೊಂಡಿದ್ದಾರೆ. ಧರ್ಮಶಾಲಾದ ಮೈದಾನದಲ್ಲಿ ಈ ಪಂದ್ಯ ನಡೆಯುತ್ತಿದೆ. ಭಾರತ ತಂಡದಲ್ಲಿ ಎರಡು ಬದಲಾವಣೆ... ಭಾರತ ತಂಡದಲ್ಲಿ ಪ್ರಮುಖವಾಗಿಯೂ ಎರಡು ಬದಲಾವಣೆಗಳನ್ನು ತರಲಾಗಿದೆ. ಗಾಯಾಳು ಹಾರ್ದಿಕ್ ಪಾಂಡ್ಯ ಹಾಗೂ ಶಾರ್ದೂಲ್ ಠಾಕೂರ್ ಅವಕಾಶ ವಂಚಿತರಾಗಿದ್ದಾರೆ. ಅವರ ಬದಲಿಗೆ ಮೊಹಮ್ಮದ್ ಶಮಿ ಹಾಗೂ ಸೂರ್ಯಕುಮಾರ್ ಯಾದವ್‌ಗೆ ಸ್ಥಾನ ಕಲ್ಪಿಸಲಾಗಿದೆ. ಮತ್ತೊಂದೆಡೆ ನ್ಯೂಜಿಲೆಂಡ್ ತಂಡದಲ್ಲಿ ಯಾವುದೇ ಬದಲಾವಣೆ ತರಲಾಗಿಲ್ಲ. 🚨 🚨 # ! & . 👌 ▶️ ://./Ua4oDBM9rn#CWC23 | # | # ../6dy150WC1S ಭಾರತ ತಂಡ ಇಂತಿದೆ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆ.ಎಲ್. ರಾಹುಲ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜ, ಕುಲದೀಪ್ ಯಾದವ್, ಜಸ್‌ಪ್ರೀತ್ ಬೂಮ್ರಾ, ಮೊಹಮ್ಮದ್ ಸಿರಾಜ್ ಮತ್ತು ಮೊಹಮ್ಮದ್ ಸಿರಾಜ್. ನ್ಯೂಜಿಲೆಂಡ್: ಟಾಮ್ ಲೇಥಮ್ (ನಾಯಕ), ಡೆವೊನ್ ಕಾನ್ವೆ, ವಿಲ್ ಯಂಗ್, ರಚಿನ್ ರವೀಂದ್ರ, ಡ್ಯಾರಿಯಲ್ ಮಿಚೆಲ್, ಗ್ಲೆನ್ ಫಿಲಿಪ್ಸ್, ಮಾರ್ಕ್ ಚಾಪ್‌ಮ್ಯಾನ್, ಮಿಚೆಲ್ ಸ್ಯಾಂಟನರ್, ಮ್ಯಾಟ್ ಹೆನ್ರಿ, ಲೂಕಿ ಫರ್ಗ್ಯೂಸನ್, ಟ್ರೆಂಟ್ ಬೌಲ್ಟ್. 𝗠𝗮𝘁𝗰𝗵 𝗗𝗮𝘆! 🆚 📍 ⛰️ ⏰ 2 💻 ://./Z3MPyeL1t7 # | #CWC23 | # | # ../2GRnnd8OYE ಅಗ್ರಸ್ಥಾನಕ್ಕಾಗಿ ಪೈಪೋಟಿ... ಉಭಯ ತಂಡಗಳು ಟೂರ್ನಿಯಲ್ಲಿ ಈವರೆಗೆ ಆಡಿರುವ ನಾಲ್ಕು ಪಂದ್ಯಗಳಲ್ಲಿ ಜಯ ಸಾಧಿಸಿವೆ. ಅಲ್ಲದೆ ಮೊದಲೆರಡು ಸ್ಥಾನಗಳನ್ನು ಹಂಚಿಕೊಂಡಿವೆ. ಈಗ ಈ ಪಂದ್ಯ ವಿಜೇತ ತಂಡವು ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಲಿದೆ. ಈ ನಿಟ್ಟಿನಲ್ಲಿ ನಿಕಟ ಪೈಪೋಟಿ ಕಂಡುಬರುವ ನಿರೀಕ್ಷೆಯಿದೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.