2023: ಬಾಂಗ್ಲಾ ವಿರುದ್ಧ ಟಾಸ್ ಗೆದ್ದ ನ್ಯೂಜಿಲೆಂಡ್, ಬೌಲಿಂಗ್ ಆಯ್ಕೆ ಚೆನ್ನೈ: ವಿಶ್ವಕಪ್‌ ಕ್ರಿಕೆಟ್‌ ಪಂದ್ಯದಲ್ಲಿ ಇಂದು ನ್ಯೂಜಿಲೆಂಡ್ ಮತ್ತು ಬಾಂಗ್ಲಾದೇಶ ತಂಡಗಳು ಮುಖಾಮುಖಿಯಾಗಿವೆ. ಚೆನ್ನೈನ ಚೆಪಾಕ್‌ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಬಾಂಗ್ಲಾ ವಿರುದ್ಧ ಟಾಸ್ ಗೆದ್ದಿರುವ ನ್ಯೂಜಿಲೆಂಡ್, ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಮೊದಲೆರಡು ಪಂದ್ಯಗಳನ್ನು ಗೆದ್ದ ಉತ್ಸಾಹದಲ್ಲಿರುವ ನ್ಯೂಜಿಲೆಂಡ್ ತಂಡಕ್ಕೆ ಸಂತಸದ ಸುದ್ದಿಯೊಂದು ಇದೆ. ಆ ತಂಡದ ಕಾಯಂ ನಾಯಕ ಕೇನ್ ವಿಲಿಯಮ್ಸನ್ ಮತ್ತು ಅನುಭವಿ ವೇಗದ ಬೌಲರ್ ಟಿಮ್‌ ಸೌಥಿ ಅವರು ಗಾಯದಿಂದ ಚೇತರಿಸಿಕೊಂಡಿದ್ದು ಬಾಂಗ್ಲಾದೇಶ ವಿರುದ್ಧ ಪಂದ್ಯಕ್ಕೆ ಲಭ್ಯರಿದ್ದಾರೆ. ಇವರಿಬ್ಬರು ಇಂಗ್ಲೆಂಡ್ ಮತ್ತು ನೆದರ್ಲೆಂಡ್ಸ್ ವಿರುದ್ಧದ ಪಂದ್ಯದಲ್ಲಿ ಆಡಿರಲಿಲ್ಲ. ಈ ಪಂದ್ಯಗಳಿಗೆ ಟಾಮ್‌ ಲಥಾಮ್‌ ಅವರು ಹಂಗಾಮಿ ನಾಯಕರಾಗಿ ಕಾರ್ಯನಿರ್ವಹಿಸಿದ್ದರು. ಈಗ ಪಾಯಿಂಟ್‌ ಪಟ್ಟಿಯಲ್ಲಿ ಕಿವೀಸ್ ತಂಡ ನಿವ್ವಳ ರನ್ ದರದ ಆಧಾರದಲ್ಲಿ ಅಗ್ರಸ್ಥಾನದಲ್ಲಿದೆ. ಭಾರತ ತಂಡ ಎರಡನೇ ಮತ್ತು ಪಾಕಿಸ್ತಾನ ತಂಡ ಮೂರನೇ ಸ್ಥಾನದಲ್ಲಿವೆ. ತಂಡಗಳು ಇಂತಿವೆ: ನ್ಯೂಜಿಲೆಂಡ್: ಡೆವೊನ್ ಕಾನ್ವೇ, ರಚಿನ್ ರವೀಂದ್ರ, ಕೇನ್ ವಿಲಿಯಮ್ಸನ್ (ನಾಯಕ), ಡೇರಿಲ್ ಮಿಚೆಲ್, ಟಾಮ್ ಲ್ಯಾಥಮ್ (ವಿಕೆಟ್ ಕೀಪರ್), ಗ್ಲೆನ್ ಫಿಲಿಪ್ಸ್, ಮಾರ್ಕ್ ಚಾಪ್ಮನ್, ಮಿಚೆಲ್ ಸ್ಯಾಂಟ್ನರ್, ಮ್ಯಾಟ್ ಹೆನ್ರಿ, ಲಾಕಿ ಫರ್ಗುಸನ್, ಟ್ರೆಂಟ್ ಬೌಲ್ಟ್. ಬಾಂಗ್ಲಾದೇಶ: ತಂಝಿದ್ ಹಸನ್, ಲಿಟ್ಟನ್ ದಾಸ್, ನಜ್ಮುಲ್ ಹೊಸೈನ್ ಶಾಂಟೊ, ಶಕಿಬ್ ಅಲ್ ಹಸನ್ (ನಾಯಕ), ಮೆಹಿದಿ ಹಸನ್ ಮಿರಾಜ್, ಮುಶ್ಫಿಕರ್ ರಹೀಮ್ (ವಿಕೆಟ್ ಕೀಪರ್), ತೌಹಿದ್ ಹೃದೊಯ್, ಮೊಹಮ್ಮದುಲ್ಲ, ಟಸ್ಕಿನ್ ಅಹ್ಮದ್, ಶೋರಿಫುಲ್ ಇಸ್ಲಾಂ, ಮುಸ್ತಫಿಜುರ್ ರೆಹ್ಮಾನ್. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.