: ಭಾರತ –ಆಸ್ಟ್ರೇಲಿಯಾ ಪಂದ್ಯದಲ್ಲಿ ಸೃಷ್ಟಿಯಾದ ದಾಖಲೆಗಳ ಪಟ್ಟಿ ಚೆನ್ನೈ: ನಗರದ ಚೆಪಾಕ್ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಏಕದಿನ ವಿಶ್ವಕಪ್ ಟೂರ್ನಿಯ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ 6 ವಿಕೆಟ್‌ಗಳಿಂದ ಗೆದ್ದ ಭಾರತ ಟೂರ್ನಿಯಲ್ಲಿ ಶುಭಾರಂಭ ಮಾಡಿದೆ. ಟಾಸ್ ಗೆದ್ದ ಆಸ್ಟ್ರೇಲಿಯಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡು 49.3 ಓವರ್‌ಗಳಲ್ಲಿ 199 ರನ್‌ ಗಳಿಸಿ ಆಲೌಟ್ ಆಯಿತು. ಈ ಗುರಿ ಬೆನ್ನಟ್ಟಿದ ಆತಿಥೇಯ ಭಾರತ, ವಿರಾಟ್‌ ಕೊಹ್ಲಿ ಮತ್ತು ಕೆ.ಎಲ್. ರಾಹುಲ್ ಜೊತೆಯಾಟದ ನೆರವಿನಿಂದ 41.2 ಓವರ್‌ಗಳಲ್ಲಿ ಗೆಲುವಿನ ನಗೆ ಬೀರಿತು. ಈ ಪಂದ್ಯದಲ್ಲಿ ಟೀಮ್ ಇಂಡಿಯಾದ ಸ್ಟಾರ್ ಬ್ಯಾಟರ್ ವಿರಾಟ್‌ ಕೊಹ್ಲಿ ಹಾಗೂ ಆಸ್ಟ್ರೇಲಿಯಾದ ಆರಂಭಿಕ ಆಟಗಾರ ಡೇವಿಡ್‌ ವಾರ್ನರ್‌ ಹೊಸ ದಾಖಲೆ ಮಾಡಿದ್ದಾರೆ. ಈ ಕುರಿತು ಅಂಕಿಅಂಶಗಳನ್ನು ಇಲ್ಲಿ ನೀಡಲಾಗಿದೆ. ವಿರಾಟ್ ಕೊಹ್ಲಿ ಏಕದಿನ ವಿಶ್ವಕಪ್‌ನಲ್ಲಿ ಭಾರತದ ಪರ ಅತ್ಯಧಿಕ ಕ್ಯಾಚ್‌ (16) ಪಡೆದ ಆಟಗಾರ ಎನಿಸಿಕೊಂಡರು. ಅನಿಲ್‌ ಕುಂಬ್ಳೆ (14 ಕ್ಯಾಚ್‌) ಅವರನ್ನು ಹಿಂದಿಕ್ಕಿದರು. ಡೇವಿಡ್‌ ವಾರ್ನರ್‌ ಏಕದಿನ ವಿಶ್ವಕಪ್‌ನಲ್ಲಿ ಅತಿವೇಗದಲ್ಲಿ (19 ಇನಿಂಗ್ಸ್‌) 1,000 ರನ್‌ ಪೂರೈಸಿದರು. ಸಚಿನ್‌ ಮತ್ತು ಡಿವಿಲಿಯರ್ಸ್‌ (20 ಇನಿಂಗ್ಸ್‌) ಅವರ ದಾಖಲೆ ಮುರಿದರು. ಏಕದಿನ ಕ್ರಿಕೆಟ್ ವಿಶ್ವಕಪ್‌ ಕ್ರಿಕೆಟ್‌ನಲ್ಲಿ ಅತಿ ವೇಗವಾಗಿ 50 ವಿಕೆಟ್‌ಗಳನ್ನು ಪಡೆದ ಬೌಲರ್‌ ಎಂಬ ದಾಖಲೆಯನ್ನು ಆಸ್ಟ್ರೇಲಿಯಾ ವೇಗಿ ಮಿಚೆಲ್ ಸ್ಟಾರ್ಕ್‌ ನಿರ್ಮಿಸಿದ್ದಾರೆ. ಭಾರತ ವಿರುದ್ಧದ ವಿಶ್ವಕಪ್‌ ಪಂದ್ಯದಲ್ಲಿ ಈ ಸಾಧನೆ ಮಾಡಿದ್ದಾರೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.