ಬಿಡಿಎಫ್‌ಎ ಸೂಪರ್ ಡಿವಿಷನ್‌ ಫುಟ್‌ಬಾಲ್‌ ಲೀಗ್‌: ಬಿಎಫ್‌ಸಿ ತಂಡಕ್ಕೆ ಜಯ ಬೆಂಗಳೂರು: ಬಿಎಫ್‌ಸಿ ತಂಡವು ಬಿಡಿಎಫ್‌ಎ ಸೂಪರ್ ಡಿವಿಷನ್‌ ಫುಟ್‌ಬಾಲ್‌ ಲೀಗ್‌ ಚಾಂಪಿಯನ್‌ಷಿಪ್‌ನ ಪಂದ್ಯದಲ್ಲಿ 2–1ರಿಂದ ಎಂಎಫ್‌ಎಆರ್‌ ಸ್ಟೂಡೆಂಟ್ಸ್‌ ಯೂನಿಯನ್‌ ಎಫ್‌ಸಿ ತಂಡದ ವಿರುದ್ಧ ಗೆಲುವು ಸಾಧಿಸಿತು. ಸೋಮವಾರ ನಡೆದ ಪಂದ್ಯದಲ್ಲಿ ಬಿಎಫ್‌ಸಿ ಕ್ಲಾರೆನ್ಸ್ ಸವಿಯೋ ಫರ್ನಾಂಡಿಸ್ (62ನೇ), ಸೌರ್ವ ಗೋಪಾಲಕೃಷ್ಣನ್ (18ನೇ) ತಲಾ ಒಂದು ಗೋಲು ಗಳಿಸಿದರು. ಸ್ಟೂಡೆಂಟ್ಸ್‌ ತಂಡದ ಪರ ಪ್ರತೀಕ್‌ ಸ್ವಾಮಿ (45+4ನೇ) ಗೋಲು ತಂದಿತ್ತರು. ಮತ್ತೊಂದು ಪಂದ್ಯದಲ್ಲಿ ಎಫ್‌ಸಿ ಡೆಕ್ಕನ್‌ ತಂಡವು 1–1ರಿಂದ ಬೆಂಗಳೂರು ಇಂಡಿಪೆಂಡೆಂಟ್ಸ್‌ ಎಫ್‌ಸಿ ತಂಡದೊಂದಿಗೆ ಡ್ರಾ ಸಾಧಿಸಿತು. ಡೆಕ್ಕನ್‌ ತಂಡದ ಎನ್‌. ರಾಕೇಶ್ ಸಿಂಗ್‌ (81ನೇ), ಇಂಡಿಪೆಂಡೆಂಟ್ಸ್ ತಂಡದ ಸರವಣಕುಮಾರ್‌ (17ನೇ) ತಲಾ ಒಂದು ಬಾರಿ ಚೆಂಡನ್ನು ಗುರಿ ಸೇರಿಸಿದರು. ಸೌತ್‌ ಯುನೈಟೆಡ್‌ ಎಫ್‌ಸಿ– ಯಂಗ್ ಚಾಲೆಂಜರ್ಸ್‌ ಎಫ್‌ಸಿ (ಮಧ್ಯಾಹ್ನ 1.30) ಕಿಕ್‌ಸ್ಟಾರ್ಟ್‌ ಎಫ್‌ಸಿ– ಕೊಡಗು ಎಫ್‌ಸಿ (ಮಧ್ಯಾಹ್ನ 3.30) ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.