ಫುಟ್‌ಬಾಲ್‌: ಸ್ಪೋರ್ಟಿಂಗ್‌ ಕ್ಲಬ್‌ ತಂಡಕ್ಕೆ ಗೆಲುವು ಬೆಂಗಳೂರು: ಸ್ಪೋರ್ಟಿಂಗ್‌ ಕ್ಲಬ್‌ ಬೆಂಗಳೂರು ತಂಡವು ಬಿಡಿಎಫ್‌ಎ ಸೂಪರ್‌ ಡಿವಿಷನ್‌ ಫುಟ್‌ಬಾಲ್‌ ಲೀಗ್ ಚಾಂಪಿಯನ್‌ಷಿಪ್‌ನ ಪಂದ್ಯದಲ್ಲಿ 2–0ಯಿಂದ ಎಂಎಫ್‌ಎಆರ್‌ ಸ್ಟೂಡೆಂಟ್ಸ್‌ ಯೂನಿಯನ್‌ ಎಫ್‌ಸಿ ತಂಡದ ವಿರುದ್ಧ ಗೆಲುವು ಸಾಧಿಸಿತು. ಭಾನುವಾರ ನಡೆದ ಪಂದ್ಯದಲ್ಲಿ ಸ್ಪೋರ್ಟಿಂಗ್‌ ಕ್ಲಬ್‌ ತಂಡದ ಪರ ಆರಿಫ್ ಶೇಖ್ (40ನೇ), ಸೈಯ್ಯದ್ ಉನೈರ್ (42ನೇ) ತಲಾ ಒಂದು ಗೋಲು ಗಳಿಸಿದರು. ಮತ್ತೊಂದು ಪಂದ್ಯದಲ್ಲಿ ಸೌತ್‌ ಯುನೈಟೆಡ್‌ ಎಫ್‌ಸಿ ತಂಡವು 4–1 ರಿಂದ ಬೆಂಗಳೂರು ಇಂಡಿಪೆಂಡೆಂಟ್ಸ್‌ ಎಫ್‌ಸಿ ತಂಡವನ್ನು ಮಣಿಸಿತು. ಇಶಾನ್‌ ಶಾಹಿ (36, 67ನೇ), ಎಂ.ಡಿ ಅಲ್ತಾಬ್ ಹುಸೇನ್ (75ನೇ), ನಿಖಿಲ್ ಮಾಲಿ (85ನೇ) ಗೋಲು ಗಳಿಸಿದರು. ಇಂಡಿಪೆಂಡೆಂಟ್ಸ್ ಪರ ಮಾಹಿನ್ ಪಿ.ಹುಸೇನ್ (90+5ನೇ) ಏಕೈಕ ಗೋಲು ತಂದಿತ್ತರು. ಇಂದಿನ ಪಂದ್ಯಗಳು ಯಂಗ್ ಚಾಲೆಂಜರ್ಸ್‌ ಎಫ್‌ಸಿ– ಕಿಕ್‌ಸ್ಟಾರ್ಟ್ಸ್ ಎಫ್‌ಸಿ (ಮಧ್ಯಾಹ್ನ 1.30) ಎಂಇಜಿ ಅಂಡ್‌ ಸೆಂಟರ್‌ ಎಫ್‌ಸಿ– ರೆಬೆಲ್ಸ್‌ ಎಫ್‌ಸಿ (ಮಧ್ಯಾಹ್ನ 3.30) ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.