2023 | ಭಾರತ ಗೆಲುವು ಸಾಧಿಸಲಿ: ಗೌತಮ್‌ ಗಂಭೀರ್‌ ನವದೆಹಲಿ: ಇಂದು ನಡೆಯುತ್ತಿರುವ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ವಿಶ್ವಕಪ್‌ ಫೈನಲ್‌ ಪಂದ್ಯದಲ್ಲಿ ಭಾರತ ಗೆಲುವು ಸಾಧಿಸಬೇಕೆಂಬುದು140 ಕೋಟಿ ಭಾರತೀಯರ ಆಶಯ ಎಂದು ಭಾರತ ಕ್ರಿಕೆಟ್‌ ತಂಡದ ಮಾಜಿ ಆಟಗಾರ ಹಾಗೂ ಬಿಜೆಪಿ ಸಂಸದ ಗೌತಮ್‌ ಗಂಭೀರ್‌ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾರತ ತಂಡದವರು ಉತ್ತಮವಾಗಿ ಪ್ರದರ್ಶನ ನೀಡಿದ್ದಾರೆ. ಭಾರತ ಈ ಬಾರಿ ಗೆಲುವು ಕಂಡರೆ, ಇದಕ್ಕಿಂತ ಉತ್ತಮವಾದ ವಿಷಯ ಮತ್ತೊಂದಿಲ್ಲ ಎಂದು ಅವರು ತಿಳಿಸಿದ್ದಾರೆ. ಅಹಮದಾಬಾದ್‌ನ ಮೊಟೇರಾದ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಫೈನಲ್‌ ಪಂದ್ಯವನ್ನು ಬಾಲಿವುಡ್‌ ನಟ– ನಟಿಯರು ಸೇರಿದಂತೆ ಅನೇಕ ಗಣ್ಯರು ಕ್ರೀಡಾಂಗಣದಲ್ಲಿ ಕುಳಿತು ಪಂದ್ಯವನ್ನು ವೀಕ್ಷಿಸುತ್ತಿದ್ದಾರೆ. # | : 2023 , , "...140 ... ... … ../8SghbiuDFF ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.