2023: ಭಾರತದ ವಿರುದ್ಧ ಟಾಸ್ ಗೆದ್ದ ಶ್ರೀಲಂಕಾ ಬೌಲಿಂಗ್‌ ಆಯ್ಕೆ ಮುಂಬೈ: ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಭಾರತದ ವಿರುದ್ಧ ಟಾಸ್ ಗೆದ್ದಿರುವ ಶ್ರೀಲಂಕಾ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಪಂದ್ಯ ಆರಂಭವಾಗಿದೆ. ಆತಿಥೇಯ ತಂಡ ಟೂರ್ನಿಯಲ್ಲಿ ಆಡಿರುವ ಎಲ್ಲ (6) ಪಂದ್ಯಗಳಲ್ಲೂ ಜಯ ಸಾಧಿಸಿ ಅಜೇಯ ಓಟ ಮುಂದುವರಿಸಿದೆ. ಇನ್ನೊಂದೆಡೆ, ಶ್ರೀಲಂಕಾ ಗೆದ್ದಿರುವುದಕ್ಕಿಂತ ಸೋತಿದ್ದೇ ಜಾಸ್ತಿ. ಆಲ್ರೌಂಡ್‌ ಪ್ರದರ್ಶನ ನೀಡುತ್ತಿರುವ ಭಾರತಕ್ಕೆ ಈವರೆಗೆ ಸಮರ್ಥ ಸವಾಲು ಎದುರಾಗಿಲ್ಲ. ಆಸ್ಟ್ರೇಲಿಯಾ ವಿರುದ್ಧ 2 ರನ್ನಿಗೆ ಮೂರು ವಿಕೆಟ್ ಕಳೆದುಕೊಂಡಾಗ ಪುಟಿದೆದ್ದ ರೀತಿ ಅಮೋಘವಾಗಿತ್ತು. ಇಂಗ್ಲೆಂಡ್‌ ವಿರುದ್ಧ ಲಖನೌದಲ್ಲಿ 229 ರನ್ ಗಳಿಸಿದ್ದಾಗ ಹೋರಾಟ ಎದುರಾಗಬಹುದು ಎನ್ನುವ ಸ್ಥಿತಿಯಲ್ಲಿ ಜಯ ಸಲೀಸಾಗಿಯೇ ದಾಖಲಾಗಿತ್ತು. ಹೀಗಾಗಿ ಮತ್ತೊಂದು ಜಯದ ವಿಶ್ವಾಸದಲ್ಲಿದೆ. ತಂಡಗಳು ಹೀಗಿವೆ ಭಾರತ ತಂಡ: ರೋಹಿತ್‌ ಶರ್ಮಾ (ನಾಯಕ), ಶುಭಮನ್‌ ಗಿಲ್‌, ವಿರಾಟ್‌ ಕೊಹ್ಲಿ, ಶ್ರೇಯಸ್‌ ಐಯರ್‌, ಕೆ. ಎಲ್‌ ರಾಹುಲ್‌, ಸೂರ್ಯಕುಮಾರ್‌ ಯಾದವ್‌, ರವೀಂದ್ರ ಜಡೇಜಾ, ಮೊಹಮ್ಮದ್‌ ಶಮಿ, ಜಸ್‌ಪ್ರೀತ್‌ ಬೂಮ್ರಾ, ಕುಲದೀಪ್‌ ಯಾದವ್‌, ಮೊಹಮ್ಮದ್‌ ಸಿರಾಜ್‌ ಶ್ರೀಲಂಕಾ ತಂಡ: ಪಾತುಮ್ ನಿಸ್ಸಾಂಕ, ದಿಮುತ್ ಕರುಣಾರತ್ನೆ, ಕುಸಾಲ್ ಮೆಂಡಿಸ್ (ನಾಯಕ ಮತ್ತು ವಿಕೆಟ್‌ ಕೀಪರ್), ಸದೀರ ಸಮರವಿಕ್ರಮ, ಚರಿತ್ ಅಸಲಂಕ, ಏಂಜೆಲೊ ಮ್ಯಾಥ್ಯೂಸ್, ದುಶನ್ ಹೇಮಂತ, ಮಹೀಶ್ ತೀಕ್ಷಣ, ಕಸುನ್ ರಜಿತ, ದುಷ್ಮಂತ ಚಮೀರ, ದಿಲ್ಶನ್ ಮಧುಶಂಕ ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.