2023: ವಿಶ್ವಕಪ್‌ನಲ್ಲಿ ಶ್ರೀನಾಥ್, ಜಹೀರ್ ದಾಖಲೆ ಮುರಿದ ಶಮಿ ಮುಂಬೈ: ಬಲಗೈ ವೇಗದ ಬೌಲರ್ ಮೊಹಮ್ಮದ್ ಶಮಿ, ಏಕದಿನ ವಿಶ್ವಕಪ್ ಕ್ರಿಕೆಟ್ ಇತಿಹಾಸದಲ್ಲೇ ಅತಿ ಹೆಚ್ಚು ವಿಕೆಟ್ ಗಳಿಸಿದ ಭಾರತದ ಬೌಲರ್ ಎಂಬ ಹಿರಿಮೆಗೆ ಭಾಜನರಾಗಿದ್ದಾರೆ. ವಾಂಖೆಡೆ ಮೈದಾನದಲ್ಲಿ ಶ್ರೀಲಂಕಾ ವಿರುದ್ಧ ನಡೆದ ಏಕದಿನ ಪಂದ್ಯದಲ್ಲಿ 18 ರನ್ನಿಗೆ ಐದು ವಿಕೆಟ್ ಗಳಿಸಿದ ಶಮಿ, ಈ ಸ್ಮರಣೀಯ ಸಾಧನೆ ಮಾಡಿದ್ದಾರೆ. ಏಕದಿನ ವಿಶ್ವಕಪ್‌ನಲ್ಲಿ ಈವರೆಗೆ ಆಡಿರುವ 14 ಪಂದ್ಯಗಳಲ್ಲಿ ಶಮಿ ಒಟ್ಟು 45 ವಿಕೆಟ್ ಗಳಿಸಿದ್ದಾರೆ. ಈ ಪಟ್ಟಿಯಲ್ಲಿ ಮಾಜಿ ವೇಗಿಗಳಾದ ಜಹೀರ್ ಖಾನ್ (44) ಹಾಗೂ ಕರ್ನಾಟಕದ ಜಾವಗಲ್ ಶ್ರೀನಾಥ್ (44) ದಾಖಲೆಯನ್ನು ಶಮಿ ಮುರಿದಿದ್ದಾರೆ. ಮೊಹಮ್ಮದ್ ಶಮಿ: 45 ಜಹೀರ್ ಖಾನ್: 44 ಜಾವಗಲ್ ಶ್ರೀನಾಥ್: 44 ಜಸ್‌ಪ್ರೀತ್ ಬೂಮ್ರಾ: 33 ಅನಿಲ್ ಕುಂಬ್ಳೆ: 31 ' - ' 💪# #CWC23 ../Vva3zfopXt ಭಾರತೀಯ ಆಟಗಾರರ ಸಂಭ್ರಮ (ಪಿಟಿಐ ಚಿತ್ರ) ಇನ್ನು ಏಕದಿನ ಕ್ರಿಕೆಟ್‌ನಲ್ಲಿ ಭಾರತದ ಪರ ಅತಿ ಹೆಚ್ಚು ಐದು ವಿಕೆಟ್ ಗಳಿಸಿದ ಬೌಲರ್‌ಗಳ ಪಟ್ಟಿಯಲ್ಲಿ ಜಾವಗಲ್ ಶ್ರೀನಾಥ್ ಹಾಗೂ ಹರ್ಭಜನ್ ಸಿಂಗ್ (ತಲಾ 3) ದಾಖಲೆಯನ್ನು ಶಮಿ ಮುರಿದಿದ್ದಾರೆ. ಒಟ್ಟಾರೆಯಾಗಿ ಏಕದಿನ ಕ್ರಿಕೆಟ್‌ನಲ್ಲಿ ಶಮಿ ನಾಲ್ಕನೇ ಬಾರಿ ಐದು ವಿಕೆಟ್‌ಗಳ ಸಾಧನೆ ಮಾಡಿದ್ದಾರೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.