ಮಿಂಚಿದ ರೊನಾಲ್ಡೊ: ಯುವೆಂಟಸ್ ಜಯಭೇರಿ ಮಿಲಾನ್‌: ಕ್ರಿಸ್ಟಿಯಾನೊ ರೊನಾಲ್ಡೊ ಗಳಿಸಿದ ಎರಡು ಗೋಲುಗಳ ಬಲದಿಂದ ಯುವೆಂಟಸ್‌ ತಂಡವು ಸೀರಿ ಎ ಫುಟ್‌ಬಾಲ್‌ ಟೂರ್ನಿಯಲ್ಲಿ ಶನಿವಾರ ಕ್ಯಾಗ್ಲಿಯರಿ ತಂಡವನ್ನು 2–0ಯಿಂದ ಸೋಲಿಸಿತು. ಕಳೆದ ಐದು ಪಂದ್ಯಗಳಲ್ಲಿ ಪೋರ್ಚುಗಲ್ ರಾಷ್ಟ್ರೀಯ ತಂಡದ ಆಟಗಾರ ರೊನಾಲ್ಡೊ ಎಂಟು ಗೋಲು ಗಳಿಸಿದ್ದಾರೆ. ಈ ಪಂದ್ಯದಲ್ಲಿ ಅವರು 38 ಹಾಗೂ 42ನೇ ನಿಮಿಷಗಳಲ್ಲಿ ಕಾಲ್ಚಳಕ ತೋರಿದರು. ಈ ಗೆಲುವಿನೊಂದಿಗೆ ಯುವೆಂಟಸ್‌ ತಂಡವು ಪಾಯಿಂಟ್ಸ್ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ಏರಿತು. ಎಸಿ ಮಿಲಾನ್‌ ಮೊದಲ ಸ್ಥಾನದಲ್ಲಿದೆ. ಮೂರನೇ ಸ್ಥಾನದಲ್ಲಿ ಸಸ್ಸುವೊಲೊ ತಂಡವಿದೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.