ಐಎಸ್‌ಎಲ್‌: ಬಿಎಫ್‌ಸಿಗೆ ಸೋಲು ಕೊಚ್ಚಿ:ಬಾರ್ತಲೋಮ ಒಗ್ಬೆಚೆ ಅವರನ್ನು ನಿಯಂತ್ರಿಸಲು ವಿಫಲವಾದ ಬೆಂಗಳೂರು ಫುಟ್‌ಬಾಲ್ ಕ್ಲಬ್‌ (ಬಿಎಫ್‌ಸಿ) ಇಲ್ಲಿ ಶನಿವಾರ ರಾತ್ರಿ ನಡೆದ ಇಂಡಿಯನ್ ಸೂಪರ್ ಲೀಗ್ (ಐಎಸ್‌ಎಲ್‌) ಫುಟ್‌ಬಾಲ್ ಟೂರ್ನಿಯ ಪಂದ್ಯದಲ್ಲಿ ಕೇರಳ ಬ್ಲಾಸ್ಟರ್ಸ್‌ಗೆ 1–2ರಲ್ಲಿ ಮಣಿಯಿತು. ಜವಾಹರಲಾಲ್ ನೆಹರು ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಒಗ್ಬೆಚೆ 45 ಮತ್ತು 72ನೇ ನಿಮಿಷಗಳಲ್ಲಿ ಚೆಂಡನ್ನು ಗುರಿ ಮುಟ್ಟಿಸಿದರು. ಬಿಎಫ್‌ಸಿ ಪರ ದೇಶಾನ್ ಬ್ರೌನ್ (16ನೇ ನಿಮಿಷ) ಗೋಲು ಗಳಿಸಿದರು. ಎಟಿಕೆಗೆ ಚೆನ್ನೈಯಿನ್ ಸವಾಲು: ಕೋಲ್ಕತ್ತದ ವಿವೇಕಾನಂದ ಯುವ ಭಾರತಿ ಕ್ರೀಡಾಂಗಣದಲ್ಲಿ ಭಾನುವಾರ ರಾತ್ರಿ ನಡೆಯಲಿರುವ ಪಂದ್ಯದಲ್ಲಿ ಎಟಿಕೆ ತಂಡ ಚೆನ್ನೈಯಿನ್ ಎಫ್‌ಸಿ ಎದುರು ಸೆಣಸಲಿದೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.