ಸುಧೀರ್‌ ಹ್ಯಾಟ್ರಿಕ್‌ ಬೆಂಗಳೂರು: ಸುಧೀರ್‌ ಕೋಟಿಕೇಲ ಹ್ಯಾಟ್ರಿಕ್‌ ಗೋಲು ಗಳಿಸಿದರು. ಅವರ ಆಟದ ನೆರವಿನಿಂದ ಕಿಕ್‌ಸ್ಟಾರ್ಟ್‌ ಎಫ್‌ಸಿ ಕರ್ನಾಟಕ ತಂಡವು ಬಿಡಿಎಫ್‌ಎ ಸೂಪರ್‌ ಡಿವಿಷನ್‌ ಲೀಗ್‌ ಫುಟ್‌ಬಾಲ್‌ ಟೂರ್ನಿಯಲ್ಲಿ ಸೌತ್‌ ಯುನೈಟೆಡ್‌ ಎಫ್‌ಸಿ ತಂಡವನ್ನು 4–0ರಿಂದ ಮಣಿಸಿತು. ಸುಧೀರ್‌ ಅವರು 17, 22 ಹಾಗೂ 49ನೇ ನಿಮಿಷದಲ್ಲಿ ಗೋಲು ಗಳಿಸಿದರೆ, ಉಜೋಚಿ ಇಮ್ಯಾನ್ಯುಯೆಲ್‌ ಅವರು 47ನೇ ನಿಮಿಷದಲ್ಲಿ ಯಶಸ್ಸು ಕಂಡರು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.