ಐಎಸ್ಎಲ್‌: ಹೈದರಾಬಾದ್‌ಗೆ ಜಯ ಹೈದರಾಬಾದ್‌ : ಉತ್ತಮ ಸಾಮರ್ಥ್ಯ ಮುಂದುವರಿಸಿದ ಹೈದರಾಬಾದ್ ಎಫ್‌ಸಿ ತಂಡವು ಇಂಡಿಯನ್ ಸೂಪರ್ ಲೀಗ್‌ (ಐಎಸ್‌ಎಲ್) ಫುಟ್‌ಬಾಲ್ ಟೂರ್ನಿಯಲ್ಲಿ ಮತ್ತೊಂದು ಜಯ ಸಂಪಾದಿಸಿತು. ಶನಿವಾರ ಇಲ್ಲಿ ನಡೆದ ಪಂದ್ಯದಲ್ಲಿ ಹೈದರಾಬಾದ್‌ 1–0ಯಿಂದ ಒಡಿಶಾ ಎಫ್‌ಸಿ ತಂಡವನ್ನು ಸೋಲಿಸಿತು. ಇದರೊಂದಿಗೆ ಪಾಯಿಂಟ್ಸ್ ಪಟ್ಟಿಯಲ್ಲಿ ಅಗ್ರಸ್ಥಾನವನ್ನು ಇನ್ನಷ್ಟು ಭದ್ರಪಡಿಸಿಕೊಂಡಿತು. ಹೈದರಾಬಾದ್ ತಂಡದ ಪರ ಮೊಹಮ್ಮದ್ ಯಾಸಿರ್ 8ನೇ ನಿಮಿಷದಲ್ಲಿ ಗೋಲು ದಾಖಲಿಸಿದರು. ಆ ಬಳಿಕ ಉಭಯ ತಂಡಗಳು ಜಿದ್ದಾಜಿದ್ದಿನ ಪೈಪೋಟಿ ನಡೆಸಿದರೂ ಯಶಸ್ಸು ಸಾಧ್ಯವಾಗಲಿಲ್ಲ. ಗುವಾಹಟಿಯಲ್ಲಿ ನಡೆದ ಇನ್ನೊಂದು ಪಂದ್ಯದಲ್ಲಿ ಕೇರಳ ಬ್ಲಾಸ್ಟರ್ಸ್ 3–0ಯಿಂದ ನಾರ್ತ್‌ಈಸ್ಟ್ ಯುನೈಟೆಡ್‌ ಎಫ್‌ಸಿ ಎದುರು ಗೆದ್ದಿತು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.