ಇಂಡಿಯನ್ ಸೂಪರ್ ಲೀಗ್: ಜಮ್ಶೆಡ್‌ಪುರಕ್ಕೆ ಒಡಿಶಾ ಸವಾಲು ವಾಸ್ಕೊ: ಉತ್ತಮ ಲಯದಲ್ಲಿರುವ ಜಮ್ಶೆಡ್‌ಪುರ ಎಫ್‌ಸಿ ಮತ್ತು ಒಡಿಶಾ ಎಫ್‌ಸಿ ತಂಡಗಳು ಇಂಡಿಯನ್ ಸೂಪರ್ ಲೀಗ್ (ಐಎಸ್‌ಎಲ್‌) ಫುಟ್‌ಬಾಲ್‌ ಟೂರ್ನಿಯಲ್ಲಿ ಮಂಗಳವಾರ ಮುಖಾಮುಖಿಯಾಗಲಿವೆ. ಒಡಿಶಾ ಇದುವರೆಗೆ ಆಡಿರುವ ನಾಲ್ಕು ಪಂದ್ಯಗಳ ಪೈಕಿ ಮೂರರಲ್ಲಿ ಗೆದ್ದು ಉತ್ತಮ ಆರಂಭ ಮಾಡಿದೆ. ಪಾಯಿಂಟ್ಸ್‌ ಪಟ್ಟಿಯಲ್ಲಿ ತಂಡವು ಸದ್ಯ ಎರಡನೇ ಸ್ಥಾನದಲ್ಲಿದೆ. ಮುಂಬೈ ಸಿಟಿ ಎಫ್‌ಸಿ ಮೊದಲ ಸ್ಥಾನದಲ್ಲಿದೆ. ಕಿಕೊ ರೆಮಿರೇಜ್ ತರಬೇತಿಯಲ್ಲಿ ಪಳಗಿರುವ ಒಡಿಶಾ, ಕಳೆದ ಪಂದ್ಯದಲ್ಲಿ ನಾರ್ತ್‌ ಈಸ್ಟ್ ಯುನೈಟೆಡ್ ಎಫ್‌ಸಿ ತಂಡವನ್ನು ಮಣಿಸಿ ಆತ್ಮವಿಶ್ವಾಸದ ಗಣಿಯಾಗಿದೆ. ಐದು ಪಂದ್ಯಗಳ ಪೈಕಿ ಜಮ್ಶೆಡ್‌ಪುರ ತಂಡವು ಎರಡರಲ್ಲಿ ಗೆದ್ದಿದೆ. ಎರಡು ಪಂದ್ಯಗಳಲ್ಲಿ ಸೋಲು ಮತ್ತು ಒಂದರಲ್ಲಿ ಡ್ರಾ ಸಾಧಿಸಿದೆ. ಪಾಯಿಂಟ್ಸ್ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿರುವ ತಂಡವು ಈ ಹಣಾಹಣಿಯಲ್ಲಿ ಗೆಲುವು ಸಾಧಿಸುವ ಛಲ ಹೊಂದಿದೆ. ಪಂದ್ಯ ಆರಂಭ: ರಾತ್ರಿ 7.30 ನೇರ ಪ್ರಸಾರ: ಸ್ಟಾರ್‌ ಸ್ಪೋರ್ಟ್ಸ್ ನೆಟ್‌ವರ್ಕ್‌ ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.