ಮಾರ್ಚ್‌ 25ರಿಂದ ರಾಷ್ಟ್ರೀಯ ಮಹಿಳಾ ಫುಟ್‌ಬಾಲ್ ಚಾಂಪಿಯನ್‌ಷಿಪ್‌ ನವದೆಹಲಿ: ರಾಷ್ಟ್ರೀಯ ಮಹಿಳಾ ಫುಟ್‌ಬಾಲ್ ಚಾಂಪಿಯನ್‌ಷಿಪ್‌ ಮಾರ್ಚ್‌ 25ರಂದು ಅರ್ಹತಾ ಸುತ್ತಿನ ಪಂದ್ಯಗಳ ಮೂಲಕ ಆರಂಭವಾಗಲಿದೆ. ದೇಶದಾದ್ಯಂತ ಆರು ತಾಣಗಳಲ್ಲಿ 31 ತಂಡಗಳು ಸೆಣಸಲಿವೆ. ಅಂತಿಮ ಸುತ್ತಿನ ಸ್ಪರ್ಧೆಗೆ 12 ತಂಡಗಳನ್ನು ಆಯ್ಕೆ ಮಾಡಲಾಗುತ್ತದೆ. ಕರ್ನಾಟಕ ತಂಡವು ಆರನೇ ಗುಂಪಿನಲ್ಲಿ ಸ್ಥಾನ ಪಡೆದಿದ್ದು, ಬೆಂಗಳೂರು ಫುಟ್‌ಬಾಲ್ ಕ್ರೀಡಾಂಗಣದಲ್ಲಿ ಪಂದ್ಯಗಳನ್ನು ಆಡಲಿದೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.