ವಿಶ್ವಕಪ್ ಲಾಂಛನ ಇಭಾ ಬಿಡುಗಡೆ ಮಾಡಿದ ಫಿಫಾ ನವದೆಹಲಿ: ಭಾರತದಲ್ಲಿ ಮುಂದಿನ ವರ್ಷ ನಡೆಯಲಿರುವ 17 ವರ್ಷದೊಳಗಿನ ಮಹಿಳೆಯರ ವಿಶ್ವಕಪ್‌ ಪುಟ್‌ಬಾಲ್ ಟೂರ್ನಿಯ ಅಧಿಕೃತ ಲಾಂಛನ ‘ಇಭಾ’ವನ್ನು ಫಿಫಾ ಸೋಮವಾರ ಬಿಡುಗಡೆ ಮಾಡಿದೆ. ಮಹಿಳೆಯರು ಮತ್ತು ಬಾಲಕಿಯರಲ್ಲಿರುವ ಪ್ರತಿಭೆಯನ್ನು ಜಗತ್ತಿಗೆ ಸಾರಿ ಹೇಳುವುದು ‘ಇಭಾ’ದ ಉದ್ದೇಶವಾಗಿದೆ ಎಂದು ಫಿಫಾ ತಿಳಿಸಿದೆ. ಮುಂದಿನ ವರ್ಷದ ಅಕ್ಟೋಬರ್ 11ರಿಂದ 30ರ ವರೆಗೆ ಟೂರ್ನಿ ನಡೆಯಲಿದೆ. ಟೂರ್ನಿಗೆ ಸಂಬಂಧಿಸಿದಂತೆ ಇದೊಂದು ಮಹತ್ವದ ಮೈಲುಗಲ್ಲಾಗಿದೆ ಎಂದು ಸ್ಥಳೀಯ ಆಯೋಜನಾ ಸಮಿತಿ ಅಧ್ಯಕ್ಷ ಮತ್ತು ಅಖಿಲ ಭಾರತ ಫುಟ್‌ಬಾಲ್ ಸಮಿತಿಯ ಅಧ್ಯಕ್ಷ ಪ್ರಫುಲ್ ಪಟೇಲ್ ಅಭಿಪ್ರಾಯಪಟ್ಟಿದ್ದಾರೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.