ಟೆನಿಸ್ ರ್‍ಯಾಂಕಿಂಗ್‌: 378 ವಾರ ಅಗ್ರಸ್ಥಾನದಲ್ಲಿ ಉಳಿದು ದಾಖಲೆ ಬರೆದ ನೊವಾಕ್‌ ಪ್ಯಾರಿಸ್‌: ಸರ್ಬಿಯಾದ ನೊವಾಕ್‌ ಜೊಕೊವಿಚ್‌ ಅವರು ಎಟಿಪಿ ಟೆನಿಸ್ ರ್‍ಯಾಂಕಿಂಗ್‌ನಲ್ಲಿ 378 ವಾರಗಳ ಕಾಲ ಅಗ್ರಸ್ಥಾನದಲ್ಲಿ ಮುಂದುವರಿಯುವ ಮೂಲಕ ಮಾಜಿ ಆಟಗಾರ್ತಿ ಸ್ಟೆಫಿ ಗ್ರಾಫ್‌ ಅವರ ದಾಖಲೆಯನ್ನು ಅಳಿಸಿಹಾಕಿದ್ದಾರೆ. ಜರ್ಮನಿಯ ಸ್ಟೆಫಿ ಗ್ರಾಫ್‌ ಅವರು ಡಬ್ಯುಟಿಎ ರ್‍ಯಾಂಕಿಂಗ್‌ನಲ್ಲಿ 377 ವಾರ ಅಗ್ರಸ್ಥಾನಲ್ಲಿದ್ದರು. ಜೊಕೊವಿಚ್‌ ಅವರು 22 ಗ್ರ್ಯಾನ್‌ಸ್ಲಾಮ್ ಪ್ರಶಸ್ತಿಗಳ ಒಡೆಯ ಆಗಿದ್ದಾರೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.