ಯುಎಸ್ ಓಪನ್: ಗಾಯದ ಸಮಸ್ಯೆಯಿಂದ ಹೊರಗುಳಿದ ಸಾನಿಯಾ ಮಿರ್ಜಾ ಬೆಂಗಳೂರು: ಯುಎಸ್ ಓಪನ್ ಟೆನಿಸ್ ಪಂದ್ಯಾವಳಿಯಿಂದ ಟೆನಿಸ್ ತಾರೆ ಸಾನಿಯಾ ಮಿರ್ಜಾ ಹೊರಗುಳಿದಿದ್ದಾರೆ. ಮೊಣಕೈ ಗಾಯದ ಸಮಸ್ಯೆಗೆ ತುತ್ತಾಗಿರುವ ಅವರು, ಯುಎಸ್ ಓಪನ್ ಪಂದ್ಯಾವಳಿಯಲ್ಲಿ ಭಾಗವಹಿಸುತ್ತಿಲ್ಲ. ಎರಡು ವಾರಗಳ ಹಿಂದೆ, ಕೆನಡಾದಲ್ಲಿ ಆಟವಾಡುತ್ತಿರುವಾಗ ಮೊಣಕೈಗೆ ಗಾಯವಾಗಿದೆ. ವೈದ್ಯರು ವಿಶ್ರಾಂತಿ ಪಡೆಯುವಂತೆ ಸೂಚಿಸಿದ್ದಾರೆ. ಚಿಕಿತ್ಸೆ ನಡೆಯುತ್ತಿದೆ. ಹೀಗಾಗಿ ಯುಎಸ್ ಓಪನ್ ಪಂದ್ಯಾವಳಿಯನ್ನು ಮಿಸ್ ಮಾಡಿಕೊಳ್ಳುತ್ತೇನೆ ಎಂದು ಸಾನಿಯಾ ಮಿರ್ಜಾ ಅವರು ಸಾಮಾಜಿಕ ತಾಣದ ಮೂಲಕ ಮಾಹಿತಿ ನೀಡಿದ್ದಾರೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.