ಮೊಂಟೆ ಕಾರ್ಲೊ ಮಾಸ್ಟರ್ಸ್ ಟೆನಿಸ್ ಟೂರ್ನಿ: ಕೊರ್ಡಾಗೆ ಮಣಿದ ಅಲ್ಕರಾಜ್‌ ಮೊಂಟೆ ಕಾರ್ಲೊ, ಮೊನಾಕೊ: ಸ್ಪೇನ್ ಆಟಗಾರ ಕಾರ್ಲೊಸ್‌ ಅಲ್ಕರಾಜ್ ಅವರು ಮೊಂಟೆ ಕಾರ್ಲೊ ಮಾಸ್ಟರ್ಸ್ ಟೂರ್ನಿಯಲ್ಲಿ ಆಘಾತ ಅನುಭವಿಸಿದ್ದಾರೆ. ಬುಧವಾರ ನಡೆದ ಟೂರ್ನಿಯ ಪುರುಷರ ಸಿಂಗಲ್ಸ್ ವಿಭಾಗದ ಎರಡನೇ ಸುತ್ತಿನಲ್ಲಿ ಅಮೆರಿಕದ ಸೆಬಾಸ್ಟಿಯನ್ ಕೊರ್ಡಾ7-6 (7/2), 6-7 (5/7), 6-3ರಿಂದ ಅಲ್ಕರಾಜ್ ಅವರಿಗೆ ಸೋಲುಣಿಸಿದರು. ಮಿಯಾಮಿ ಓಪನ್‌ ಟೂರ್ನಿಯಲ್ಲಿ ಪ್ರಶಸ್ತಿ ಜಯಿಸಿದ್ದ ಅಲ್ಕರಾಜ್, ಮೂರು ತಾಸುಗಳಿಗಿಂತ ಹೆಚ್ಚು ಕಾಲ ನಡೆದ ರೋಚಕ ಹಣಾಹಣಿಯಲ್ಲಿ ಮಣಿದರು. ವಿಶ್ವ ರ‍್ಯಾಂಕಿಂಗ್‌ನಲ್ಲಿ 42ನೇ ಸ್ಥಾನದಲ್ಲಿರುವ ಕೊರ್ಡಾ ಅವರು ಮೂರನೇ ಸುತ್ತಿನ ಪಂದ್ಯದಲ್ಲಿ ತಮ್ಮದೇ ದೇಶದ ಟೇಲರ್ ಫ್ರಿಡ್ಜ್ ಅಥವಾ ಕ್ರೊವೇಷ್ಯಾದ ಮರಿನ್ ಸಿಲಿಕ್ ಅವರನ್ನು ಎದುರಿಸುವರು. ವಿಶ್ವ ರ‍್ಯಾಂಕಿಂಗ್‌ನಲ್ಲಿ ಮೊದಲ ಸ್ಥಾನದಲ್ಲಿರುವ ನೊವಾಕ್ ಜೊಕೊವಿಚ್‌ ಮಂಗಳವಾರ ಮೊದಲ ಸುತ್ತಿನ ಪಂದ್ಯದಲ್ಲಿ 46ನೇ ಸ್ಥಾನದಲ್ಲಿರುವ ಸ್ಪೇನ್ ಆಟಗಾರ ಅಲೆಜಾಂಡ್ರೊ ಡವಿಡೊವಿಚ್‌ ಫೊಕಿನಾ ಎದುರು 3–6, 7–6, 1–6ರಲ್ಲಿ ಸೋತಿದ್ದರು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.