ಪೆಲೆಗೆ ಇನ್ನೂ ಚಿಕಿತ್ಸೆ ಪ್ಯಾರಿಸ್‌: ಫುಟ್‌ಬಾಲ್‌ ದಿಗ್ಗಜ ಪೆಲೆ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ಮುಂಜಾಗ್ರತೆಯಾಗಿ ಇನ್ನೊಂದು ದಿನ ಆಸ್ಪತ್ರೆಯಲ್ಲಿ ಕಳೆಯಲಿದ್ದಾರೆ ಎಂದು ಅವರ ಸಲಹೆಗಾರರು ತಿಳಿಸಿದ್ದಾರೆ. 78 ವರ್ಷದ ಪೆಲೆ, ಮೂತ್ರದ ಸೋಂಕಿನ ಕಾರಣ ಕಳೆದ ಬುಧವಾರ ಆಸ್ಪತ್ರೆಗೆ ದಾಖಲಾಗಿದ್ದರು. ‘ಸೋಮವಾರ ರಾತ್ರಿ ಕೂಡ ಆಸ್ಪತ್ರೆಯಲ್ಲಿ ಕಳೆದಿದ್ದು, ತಕ್ಷಣವೇ ಬಿಡುಗಡೆಗೊಳಿಸಲು ನಿರ್ಧಾರ ತೆಗೆದುಕೊಂಡಿಲ್ಲ. ವೈದ್ಯರ ಸೂಚನೆಯಂತೆ ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗುವುದು’ ಎಂದು ತಿಳಿಸಿದ್ದಾರೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.