ಫುಟ್‌ಬಾಲ್‌: ಮಾರ್ಸ್‌ಗೆ ಜಯ ಬೆಂಗಳೂರು: ಮಂಗಲ್‌ ಮತ್ತು ಪಿ.ಮನೋಜ್‌ ಗಳಿಸಿದ ತಲಾ ಒಂದು ಗೋಲುಗಳ ನೆರವಿನಿಂದ ಬೆಂಗಳೂರು ಮಾರ್ಸ್‌ ಎಫ್‌ಸಿ ತಂಡ ಬೆಂಗಳೂರು ಜಿಲ್ಲಾ ಫುಟ್‌ಬಾಲ್‌ ಸಂಸ್ಥೆ (ಬಿಡಿಎಫ್‌ಎ) ಆಶ್ರಯದ ‘ಬಿ’ ಡಿವಿಷನ್‌ ಲೀಗ್‌ ಪಂದ್ಯದಲ್ಲಿ ಗೆದ್ದಿದೆ. ಅಶೋಕನಗರದಲ್ಲಿರುವ ಬೆಂಗಳೂರು ಫುಟ್‌ಬಾಲ್‌ ಕ್ರೀಡಾಂಗಣದಲ್ಲಿ ಗುರುವಾರ ನಡೆದ ‘ಎ’ ಗುಂಪಿನ ಹಣಾಹಣಿಯಲ್ಲಿ ಮಾರ್ಸ್‌ ಎಫ್‌ಸಿ 2–1 ಗೋಲುಗಳಿಂದ ಎಕ್ಸ್‌ಎಲ್‌ಆರ್‌ 8 ಎಫ್‌ಸಿ ತಂಡವನ್ನು ಪರಾಭವಗೊಳಿಸಿತು. ಮಾರ್ಸ್‌ ತಂಡದ ಮಂಗಲ್‌ 27ನೇ ನಿಮಿಷದಲ್ಲಿ ಗೋಲು ಹೊಡೆದರು. ಎಕ್ಸ್‌ಎಲ್‌ಆರ್‌ ತಂಡದ ಕಾರ್ತಿಕ್‌ 38ನೇ ನಿಮಿಷದಲ್ಲಿ ಚೆಂಡನ್ನು ಗುರಿ ತಲುಪಿಸಿ 1–1 ಸಮಬಲಕ್ಕೆ ಕಾರಣರಾದರು. 33ನೇ ನಿಮಿಷದಲ್ಲಿ ಗೋಲು ದಾಖಲಿಸಿದ ಮನೋಜ್‌, ಮಾರ್ಸ್‌ ತಂಡದ ಸಂಭ್ರಮಕ್ಕೆ ಕಾರಣರಾದರು. ಬಿಟಿಎಂ ಎಫ್‌ಸಿ ಮತ್ತು ಗೋವನ್ಸ್‌ ಎಫ್‌ಸಿ ನಡುವಣ ದಿನದ ಇನ್ನೊಂದು ಪಂದ್ಯ ಗೋಲು ರಹಿತ ಡ್ರಾದಲ್ಲಿ ಅಂತ್ಯವಾಯಿತು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.