ಸೆಮಿಫೈನಲ್‌ ಮೇಲೆ ಭಾರತ ತಂಡದ ಕಣ್ಣು ಕಠ್ಮಂಡು: ಸೆಮಿಫೈನಲ್‌ ಮೇಲೆ ಕಣ್ಣಿಟ್ಟಿರುವ ಭಾರತ 18 ವರ್ಷದೊಳಗಿನವರ ಫುಟ್‌ಬಾಲ್‌ ತಂಡ ಸ್ಯಾಫ್‌ ಚಾಂಪಿಯನ್‌ಷಿಪ್‌ನಲ್ಲಿ ಶ್ರೀಲಂಕಾ ತಂಡವನ್ನು ಎದುರುಗೊಳ್ಳಲಿದೆ. ಮೊದಲ ಪಂದ್ಯದಲ್ಲಿ ಭಾರತ ಸೋಮವಾರ ಬಾಂಗ್ಲಾದೇಶ ತಂಡದ ವಿರುದ್ಧ ಗೋಲುರಹಿತ ಡ್ರಾ ಸಾಧಿಸಿತ್ತು. ಗುಂಪು ಹಂತದ ಕೊನೆಯ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಡ್ರಾ ಸಾಧಿಸಿದರೂ ಭಾರತ ಸೆಮಿಗೆ ಪ್ರವೇಶಿಸಲಿದೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.