ವಿಂಬಲ್ಡನ್‌ ಟೆನಿಸ್‌ ಟೂರ್ನಿ: ಸೆಮಿಫೈನಲ್‌ ಪ್ರವೇಶಿಸಿದ ನೊವಾಕ್‌ ಜೊಕೊವಿಚ್‌ ಲಂಡನ್‌ (ಎಎಫ್‌ಪಿ/ ರಾಯಿಟರ್ಸ್): ವಿಶ್ವದ ಅಗ್ರಮಾನ್ಯ ಆಟಗಾರ ಸರ್ಬಿಯದ ನೊವಾಕ್‌ ಜೊಕೊವಿಚ್‌, ಕ್ವಾರ್ಟರ್‌ಫೈನಲ್‌ನಲ್ಲಿ ಆ್ಯಂಡ್ರೆ ರುಬ್ಲೆವ್‌ ಅವರನ್ನು ಮಣಿಸಿ ವಿಂಬಲ್ಡನ್‌ ಟೆನಿಸ್‌ ಟೂರ್ನಿಯ ಪುರುಷರ ಸಿಂಗಲ್ಸ್‌ ವಿಭಾಗದ ಸೆಮಿಫೈನಲ್‌ ಪ್ರವೇಶಿಸಿದರು. ಕ್ವಾರ್ಟರ್‌ ಫೈನಲ್‌ ಪಂದ್ಯದಲ್ಲಿ ಆ್ಯಂಡ್ರೆ ರುಬ್ಲೆವ್‌ ವಿರುದ್ಧ 4-6, 6-1, 6-4, 6-3 ರಿಂದ ಗೆದ್ದು ಸೆಮಿಫೈನಲ್‌ ಪ್ರವೇಶಿಸಿದರು. ಈ ಮೂಲಕ ಅವರು ವಿಂಬಲ್ಡನ್‌ ಟೆನಿಸ್‌ ಟೂರ್ನಿಯಲ್ಲಿ 12ನೇ ಸಲ ಸೆಮಿಫೈನಲ್‌ ಪ್ರವೇಶಿಸಿದರು. ನೊವಾಕ್‌ ಜೊಕೊವಿಚ್‌ ಕಳೆದ ಫ್ರೆಂಚ್‌ ಓಪನ್‌ ಟೆನಿಸ್‌ ಟೂರ್ನಿ ಗೆದ್ದಿದ್ದರು. . @ 4-6, 6-1, 6-4, 6-3 46th - 👏# ../SfkYzYzm7b ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.