ರ್‍ಯಾಂಕಿಂಗ್‌: ಸ್ಟೆಫಿ ದಾಖಲೆ ಸರಿಗಟ್ಟಿದ ಜೊಕೊವಿಚ್ ಪ್ಯಾರಿಸ್‌ : ಸರ್ಬಿಯದ ನೊವಾಕ್‌ ಜೊಕೊವಿಚ್‌ ಅವರು ಎಟಿಪಿ ಟೆನಿಸ್ ರ್‍ಯಾಂಕಿಂಗ್‌ನಲ್ಲಿ ಅಗ್ರಸ್ಥಾನದಲ್ಲಿ ಮುಂದುವರಿಯುವ ಮೂಲಕ ಮಾಜಿ ಆಟಗಾರ್ತಿ ಸ್ಟೆಫಿ ಗ್ರಾಫ್‌ ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ. ಸೋಮವಾರ ಬಿಡುಗಡೆಯಾದ ರ್‍ಯಾಂಕಿಂಗ್‌ನಲ್ಲಿ ಜೊಕೊವಿಚ್‌ ಅಗ್ರಸ್ಥಾನ ಉಳಿಸಿಕೊಂಡಿದ್ದಾರೆ. ಈ ಮೂಲಕ ದಾಖಲೆಯ 377 ವಾರಗಳ ಕಾಲ ಅಗ್ರಸ್ಥಾನದಲ್ಲಿದ್ದ ಸಾಧನೆ ಮಾಡಿದರು. ಜರ್ಮನಿಯ ಸ್ಟೆಫಿ ಗ್ರಾಫ್‌ ಅವರು ಡಬ್ಯುಟಿಎ ರ್‍ಯಾಂಕಿಂಗ್‌ನಲ್ಲಿ 377 ವಾರ ಅಗ್ರಸ್ಥಾನಲ್ಲಿದ್ದರು. ಇನ್ನೊಂದು ವಾರ ಕಳೆದರೆ ಸ್ಟೆಫಿ ಅವರ ದಾಖಲೆಯನ್ನು ಜೊಕೊವಿಚ್‌ ಮುರಿಯಲಿದ್ದಾರೆ. ನೂತನ ರ‍್ಯಾಂಕಿಂಗ್‌ ಪಟ್ಟಿಯಲ್ಲಿ ಸ್ಪೇನ್‌ನ ಕಾರ್ಲೊಸ್‌ ಅಲ್ಕರಾಜ್‌ ಎರಡನೇ ಸ್ಥಾನದಲ್ಲಿದ್ದರೆ, ಗ್ರೀಸ್‌ನ ಸ್ಟೆಫಾನೊಸ್‌ ಸಿಟ್ಸಿಪಸ್‌ ಮೂರನೇ ಸ್ಥಾನದಲ್ಲಿದ್ದಾರೆ. ರಷ್ಯಾದ ಡೇನಿಯಲ್‌ ಮೆಡ್ವೆಡೆವ್‌ ಅವರು ಮತ್ತೆ ಅಗ್ರ 10 ರಲ್ಲಿ ಕಾಣಿಸಿಕೊಂಡಿದ್ದು, ಎಂಟನೇ ಸ್ಥಾನದಲ್ಲಿದ್ದಾರೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.