ನಾಲ್ಕರ ಘಟ್ಟಕ್ಕೆ ರೋಹನ್‌– ಸಾನಿಯಾ ಮೆಲ್ಬರ್ನ್‌: ಆಸ್ಟ್ರೇಲಿಯಾ ಓಪನ್‌ ಟೆನಿಸ್‌ ಟೂರ್ನಿಯಲ್ಲಿ ಭಾರತದ ರೋಹನ್‌ ಬೋಪಣ್ಣ ಮತ್ತು ಸಾನಿಯಾ ಮಿರ್ಜಾ ಜೋಡಿ ಕ್ವಾರ್ಟರ್‌ ಫೈನಲ್‌ನಲ್ಲಿ ಕಣಕ್ಕಿಳಿಯದೆಯೇ ಮಿಶ್ರ ಡಬಲ್ಸ್‌ ವಿಭಾಗದ ಸೆಮಿಫೈನಲ್‌ ಪ್ರವೇಶಿಸಿತು. ಮಂಗಳವಾರ ನಡೆಯಬೇಕಿದ್ದ ಪಂದ್ಯದಲ್ಲಿ ಭಾರತದ ಜೋಡಿ ಎಲೆನಾ ಒಸ್ಟಪೆಂಕೊ– ಡೇವಿಡ್ ವೆಗಾ ಹೆರ್ನಾಂಡೆಜ್‌ ವಿರುದ್ಧ ಪೈಪೋಟಿ ನಡೆಸಬೇಕಿತ್ತು. ಆದರೆ ಎಲೆನಾ–ಡೇವಿಡ್ ಹಿಂದೆ ಸರಿದರು. ಪುರುಷರ ಡಬಲ್ಸ್‌ನಲ್ಲಿ ಮ್ಯಾಥ್ಯೂ ಎಬ್ಡೆನ್‌ ಜೊತೆ ಆಡಿದ್ದ ಬೋಪಣ್ಣ ಮೊದಲ ಸುತ್ತಿನಲ್ಲೇ ಸೋತಿದ್ದರು. ಮಹಿಳೆಯರ ಡಬಲ್ಸ್‌ನಲ್ಲಿ ಸಾನಿಯಾ ಮತ್ತು ಕಜಕಸ್ತಾನದ ಅನಾ ಡ್ಯಾನಿಲಿನಾ ಎರಡನೇ ಸುತ್ತಿನಲ್ಲಿ ಹೊರಬಿದ್ದಿದ್ದರು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.