ಚಿರಾಗ್‌ಗೆ ಬೋಯ್ ತರಬೇತಿ ನವದೆಹಲಿ: ಟೋಕಿಯೊ ಒಲಿಂಪಿಕ್ಸ್ ಟಿಕೆಟ್‌ ನಿರೀಕ್ಷೆಯಲ್ಲಿರುವ ಭಾರತ ಡಬಲ್ಸ್ ವಿಭಾಗದ ಟೆನಿಸ್ ಆಟಗಾರರಾದ ಚಿರಾಗ್ ಶೆಟ್ಟಿ–ಸಾತ್ವಿಕ್ ಸಾಯಿರಾಜ್ ರಣಕಿರೆಡ್ಡಿ ಅವರಿಗೆ ಒಲಿಂಪಿಕ್ಸ್ ಬೆಳ್ಳಿ ಪದಕ ವಿಜೇತ, ಡೆನ್ಮಾರ್ಕ್‌ನ ಮಥಿಯಾಸ್ ಬೋಯ್ ತರಬೇತಿ ನೀಡಲಿದ್ದಾರೆ. ಟಾರ್ಗೆಟ್ ಒಲಿಂಪಿಕ್ ಪೋಡಿಯಂ ಯೋಜನೆಯಡಿ (ಟಾಪ್ಸ್)ಬೋಯ್ ಅವರನ್ನು ಕೋಚ್ ಆಗಿ ನೇಮಿಸಿಕೊಳ್ಳುವ ನಿರ್ಧಾರವನ್ನು ಭಾರತ ಕ್ರೀಡಾ ಪ್ರಾಧಿಕಾರದ (ಸಾಯ್‌) ಮಿಷನ್ ಒಲಿಂಪಿಕ್‌ ಸೆಲ್‌ ತೆಗೆದುಕೊಂಡಿದೆ. 2012ರ ಲಂಡನ್ ಒಲಿಂಪಿಕ್ಸ್‌ನ ಡಬಲ್ಸ್ ವಿಭಾಗದಲ್ಲಿ ಬೋಯ್‌ ಬೆಳ್ಳಿ ಪದಕ ಗೆದ್ದುಕೊಂಡಿದ್ದರು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.