ಫೆಡರರ್‌ ‘1,500’ ಬಾಸೆಲ್‌: ಸ್ವಿಟ್ಜರ್ಲೆಂಡ್‌ನ ಟೆನಿಸ್‌ ತಾರೆ ರೋಜರ್‌ ಫೆಡರರ್‌ ಅವರು ಸೋಮವಾರ ಹೊಸ ಮೈಲುಗಲ್ಲು ಸ್ಥಾಪಿಸಿದರು. ಬಾಸೆಲ್‌ ಓಪನ್‌ ಟೂರ್ನಿಯ ಮೊದಲ ಸುತ್ತಿನಲ್ಲಿ ಕಣಕ್ಕಿಳಿಯುವ ಮೂಲಕ ವೃತ್ತಿಬದುಕಿನಲ್ಲಿ 1,500 ಪಂದ್ಯಗಳನ್ನು ಆಡಿದ ಸಾಧನೆ ಮಾಡಿದರು. ಈ ಹಣಾಹಣಿಯಲ್ಲಿ 38 ವರ್ಷ ವಯಸ್ಸಿನ ಫೆಡರರ್‌ 6–2, 6–1ರಲ್ಲಿ ಜರ್ಮನಿಯ ಪೀಟರ್‌ ಗೊಜೊವ್‌ಜಿಕ್‌ ಅವರನ್ನು ಮಣಿಸಿದರು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.