ಸಿಮೊನಾ ಹಲೆಪ್‌ಗೆ ಕೋವಿಡ್‌–19 ವಾಷಿಂಗ್ಟನ್‌: ವಿಂಬಲ್ಡನ್‌ ಟೆನಿಸ್‌ ಟೂರ್ನಿಯ ಮಹಿಳಾ ಸಿಂಗಲ್ಸ್ ವಿಭಾಗದ ಚಾಂಪಿಯನ್‌ ಸಿಮೊನಾ ಹಲೆಪ್‌ ಅವರಿಗೆ ಕೋವಿಡ್‌ –19 ದೃಢಪಟ್ಟಿದೆ. ‘ಕೊರೊನಾ ಸೋಂಕಿನ ಲಕ್ಷಣಗಳು ಕಂಡುಬಂದಿದ್ದು, ಚೇತರಿಸಿಕೊಳ್ಳುತ್ತಿದ್ದೇನೆ. ಸದ್ಯ ಪ್ರತ್ಯೇಕವಾಸದಲ್ಲಿದ್ದೇನೆ‘ ಎಂದು 29 ವರ್ಷದ ರುಮೇನಿಯಾ ಆಟಗಾರ್ತಿ ಟ್ವೀಟ್‌ ಮಾಡಿದ್ದಾರೆ. ವಿಶ್ವ ಕ್ರಮಾಂಕದಲ್ಲಿ ಹಲೆಪ್‌ ಎರಡನೇ ಸ್ಥಾನದಲ್ಲಿದ್ದಾರೆ. 2019ರಲ್ಲಿ ವಿಂಬಲ್ಡನ್ ಟ್ರೋಫಿ ಗೆದ್ದಿರುವ ಅವರು, 2018ರ ಫ್ರೆಂಚ್‌ ಓಪನ್‌ ಪ್ರಶಸ್ತಿಯನ್ನೂ ತಮ್ಮದಾಗಿಸಿಕೊಂಡಿದ್ದಾರೆ. ಈ ವರ್ಷದ ವಿಂಬಲ್ಡನ್‌ ಟೂರ್ನಿಯು ಕೊರೊನಾ ವೈರಸ್‌ ಹಾವಳಿಯ ಹಿನ್ನೆಲೆಯಲ್ಲಿ ರದ್ದಾಗಿದೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.