ಟೆನಿಸ್‌: ಸೆಮಿಗೆ ಕ್ವಿಟೋವಾ ಸ್ಟಟ್‌ಗರ್ಟ್‌, ಜರ್ಮನಿ (ಎಎಫ್‌ಪಿ): ಆರಂಭಿಕ ನಿರಾಸೆಯಿಂದ ಎದೆಗುಂದದೆ ದಿಟ್ಟ ಆಟ ಆಡಿದ ಜೆಕ್‌ ಗಣರಾಜ್ಯದ ಆಟಗಾರ್ತಿ ಪೆಟ್ರಾ ಕ್ವಿಟೋವಾ, ಸ್ಟಟ್‌ಗರ್ಟ್‌ ಟೆನಿಸ್‌ ಟೂರ್ನಿಯಲ್ಲಿ ಸೆಮಿಫೈನಲ್‌ ಪ್ರವೇಶಿಸಿದ್ದಾರೆ. ಶುಕ್ರವಾರ ನಡೆದ ಮಹಿಳಾ ಸಿಂಗಲ್ಸ್‌ ವಿಭಾಗದ ಕ್ವಾರ್ಟರ್‌ ಫೈನಲ್‌ನಲ್ಲಿ ಕ್ವಿಟೋವಾ 2–6, 6–2, 6–3 ರಲ್ಲಿ ಅನಸ್ತೇಸಿಜಾ ಸೆವಾಸ್ಟೋವಾ ಎದುರು ಗೆದ್ದರು. ವಿಶ್ವ ರ‍್ಯಾಂಕಿಂಗ್‌ನಲ್ಲಿ ಮೂರನೇ ಸ್ಥಾನದಲ್ಲಿರುವ ಪೆಟ್ರಾ, ಮೊದಲ ಸೆಟ್‌ನಲ್ಲಿ ಆಘಾತ ಕಂಡರು. ನಂತರ ಜೆಕ್‌ ಗಣರಾಜ್ಯದ ಆಟಗಾರ್ತಿ ಮೋಡಿ ಮಾಡಿದರು. ಎರಡು ಮತ್ತು ಮೂರನೇ ಸೆಟ್‌ಗಳಲ್ಲಿ ಮಿಂಚಿನ ಆಟ ಆಡಿ ಗೆಲುವಿನ ತೋರಣ ಕಟ್ಟಿದರು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.