ಟೆನಿಸ್‌ ಅಂಗಣದಲ್ಲಿ ಮರ್ರೆ ವಾಷಿಂಗ್ಟನ್‌: ಶಸ್ತ್ರಚಿಕಿತ್ಸೆಗೆ ಒಳಗಾಗಿ ಗುಣಮುಖರಾಗಿರುವ ಆ್ಯಂಡಿ ಮರ‍್ರೆ ಎರಡು ತಿಂಗಳ ನಂತರಟೆನಿಸ್‌ ಅಂಗಣದಲ್ಲಿ ಕಾಣಿಸಿಕೊಂಡಿದ್ದಾರೆ. ಕಳೆದ ಜನವರಿಯಲ್ಲಿ ನಡೆದ ಆಸ್ಟ್ರೇಲಿಯನ್‌ ಓಪನ್‌ ಟೆನಿಸ್‌ ಟೂರ್ನಿಯ ಮೊದಲ ಸುತ್ತಿನಲ್ಲಿ ನಿರ್ಗಮಿಸಿದ ಬಳಿಕ ಮರ್ರೆ ಯಾವುದೇ ಪಂದ್ಯದಲ್ಲಿ ಆಡಿರಲಿಲ್ಲ. ಅವರು ಸೊಂಟದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಪೂರ್ಣ ಗುಣಮುಖನಾಗಿದ್ದು ವಿಂಬಲ್ಡನ್‌ನಲ್ಲಿ ಆಡಲು ಸಾಧ್ಯವಾಗುವ ನಿರೀಕ್ಷೆ ಇದೆ ಎಂದು ಕಳೆದ ತಿಂಗಳು ತಿಳಿಸಿದ್ದರು. ಈಗ, ಹೊರಾಂಗಣ ಕೋರ್ಟ್‌ನಲ್ಲಿ ಆಟವಾಡುತ್ತಿರುವ ದೃಶ್ಯವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹಾಕಿದ್ದಾರೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.