ನಿವೃತ್ತಿ ಸೂಚನೆ ನೀಡಿದ ಆ್ಯಂಡಿ ಮರ್ರೆ ಮೆಲ್ಬರ್ನ್‌: ಸೊಂಟನೋವಿನಿಂದ ಬಳಲುತ್ತಿರುವ ಬ್ರಿಟನ್‌ನ ಆ್ಯಂಡಿ ಮರ್ರೆ ಈ ವರ್ಷ ಟೆನಿಸ್‌ಗೆ ವಿದಾಯ ಹೇಳುವುದಾಗಿ ಶುಕ್ರವಾರ ತಿಳಿಸಿದ್ದಾರೆ. ಮುಂದಿನ ವಾರ ಆರಂಭವಾಗಲಿರುವ ಆಸ್ಟ್ರೇಲಿಯಾ ಓಪನ್ ತಮ್ಮ ವೃತ್ತಿ ಜೀವನದ ಕೊನೆಯ ಟೂರ್ನಿ ಆಗುವ ಸಾಧ್ಯತೆ ಇದೆ ಎಂದು ಅವರು ಹೇಳಿದ್ದಾರೆ. ವಿಶ್ವದ ಒಂದನೇ ಕ್ರಮಾಂಕದ ಆಟಗಾರ ಆಗಿದ್ದ ಮರ್ರೆ ಮೂರು ಬಾರಿ ಗ್ರ್ಯಾನ್‌ಸ್ಲಾಂ ಪ್ರಶಸ್ತಿ ಗೆದ್ದಿದ್ದರು. ಶುಕ್ರವಾರ ಈ ವಿಷಯ ತಿಳಿಸಿದ ಅವರು ಕಣ್ಣೀರು ಹಾಕಿದರು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.