ಟೆನಿಸ್‌: ನಿಕ್ಷೇಪ್‌ ಶುಭಾರಂಭ ಬೆಂಗಳೂರು: ಕರ್ನಾಟಕದ ಬಿ.ಆರ್‌.ನಿಕ್ಷೇಪ್‌, ದೆಹಲಿಯಲ್ಲಿ ನಡೆಯುತ್ತಿರುವ ಎಐಟಿಎ ಟೆನಿಸ್‌ ಟೂರ್ನಿಯಲ್ಲಿ ಶುಭಾರಂಭ ಮಾಡಿದ್ದಾರೆ. ಸೋಮವಾರ ನಡೆದ ಪುರುಷರ ಸಿಂಗಲ್ಸ್‌ ವಿಭಾಗದ ಮೊದಲ ಸುತ್ತಿನ ಹಣಾಹಣಿಯಲ್ಲಿ ನಿಕ್ಷೇಪ್‌ 6–3, 6–7, 6–4ರಲ್ಲಿ ಅಲೆಕ್ಸ್‌ ಸೋಲಂಕಿ ಅವರನ್ನು ಪರಾಭವಗೊಳಿಸಿದರು. ಮೊದಲ ಸೆಟ್‌ನಲ್ಲಿ ನಿರಾಯಾಸವಾಗಿ ಗೆದ್ದ ನಿಕ್ಷೇಪ್‌, ರೋಚಕ ಹೋರಾಟ ಕಂಡುಬಂದ ಎರಡನೇ ಸೆಟ್‌ನಲ್ಲಿ ಎಡವಿದರು. ಹೀಗಾಗಿ 1–1 ಸಮಬಲ ಕಂಡುಬಂತು. ನಿರ್ಣಾಯಕ ಎನಿಸಿದ್ದ ಮೂರನೇ ಸೆಟ್‌ನಲ್ಲಿ ಮಿಂಚಿದ ಕರ್ನಾಟಕದ ಆಟಗಾರ ಗೆಲುವಿನ ತೋರಣ ಕಟ್ಟಿದರು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.