ಜಾವೆಲಿನ್ ಎಸೆತಗಾರ ಅರ್ಷದ್‌ಗೆ ಮೊಣಕಾಲಿನ ಶಸ್ತ್ರಚಿಕಿತ್ಸೆ ಕರಾಚಿ (ಪಿಟಿಐ): ಪ್ಯಾರಿಸ್ ಒಲಿಂಪಿಕ್ಸ್‌ಗೂ ಮುನ್ನ ಮೊಣಕಾಲಿನ ಶಸ್ತ್ರಚಿಕಿತ್ಸೆಗೆ ಒಳಗಾಗಲು ಪಾಕಿಸ್ತಾನದ ಜಾವೆಲಿನ್ ಥ್ರೋವರ್ ಅರ್ಷದ್ ನದೀಮ್ ಇಂಗ್ಲೆಂಡ್‌ಗೆ ತೆರಳಿದ್ದಾರೆ. 2022 ರ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನ ಗೆದ್ದಿದ್ದ ನದೀಮ್, ಮೊಣಕಾಲಿನ ಸಮಸ್ಯೆಯಿಂದಾಗಿ ಕಳೆದ ವರ್ಷ ಚೀನಾದಲ್ಲಿ ನಡೆದ ಏಷ್ಯನ್ ಕ್ರೀಡಾಕೂಟದಿಂದ ಹಿಂದೆ ಸರಿದಿದ್ದರು. ‘ಕಳೆದ ವರ್ಷದಿಂದ ಮೊಣಕಾಲಿನ ನೋವು ನನ್ನನ್ನು ಕಾಡುತ್ತಿದೆ. ನಾನು ಪುನಶ್ಚೇತನ ಕಾರ್ಯಕ್ರಮಗಳಲ್ಲೂ ಪಾಲ್ಗೊಂಡೆ. ಆದರೆ ಅವು ಕೆಲಸ ಮಾಡಲಿಲ್ಲ’ ಎಂದು ಅರ್ಷದ್‌ ಹೇಳಿದರು. ವಿಶ್ವ ಚಾಂಪಿಯನ್‌ಷಿಪ್‌ನಲ್ಲಿ ಬೆಳ್ಳಿ ಪದಕ ಗೆದ್ದ ಮೊದಲ ಪಾಕಿಸ್ತಾನ ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಅವರು ಕಳೆದ ವರ್ಷ ಪಾತ್ರರಾಗಿದ್ದರು. ಭಾರತದ ನೀರಜ್ ಚೋಪ್ರಾ ಆ (ಪ್ಯಾರಿಸ್‌) ಕೂಟದಲ್ಲಿ ಚಿನ್ನ ಜಯಿಸಿದ್ದರು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.