ಶಾಟ್‌ಪಟ್‌: ರಾಜ್ಯಮಟ್ಟಕ್ಕೆ ಆಯ್ಕೆ ಸಂತೇಮರಹಳ್ಳಿ: ಚಾಮರಾಜನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಈಚೆಗೆ ನಡೆದ ಹಿರಿಯ ಪ್ರಾಥಮಿಕ ಶಾಲೆಗಳ ಅಂಗವಿಕಲ ಮಕ್ಕಳ ಜಿಲ್ಲಾ ಮಟ್ಟದ ಕ್ರೀಡಾಕೂಟದ ಶಾಟ್‌ಪಟ್‌ನಲ್ಲಿ ಸಮೀಪದ ಮಂಗಲ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಎಸ್.ಪವನ್ ಪ್ರಥಮ ಸ್ಥಾನಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಈತ ಜಾವೆಲಿನ್ ಎಸೆತದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾನೆ. ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುವ ವಿದ್ಯಾರ್ಥಿಯನ್ನು ಮುಖ್ಯಶಿಕ್ಷಕರು ಹಾಗೂ ಸಿಬ್ಬಂದಿ ಅಭಿನಂದಿಸಿದ್ದಾರೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.