ಐಪಿಎಲ್, ಕೆಪಿಎಲ್ ಮಾದರಿಯಲ್ಲಿ ಕೊಕ್ಕೊ ಪಂದ್ಯಾವಳಿ ತಿಪಟೂರು: ಕೊಕ್ಕೊ ದೇಸಿಯ ಕ್ರೀಡೆಯಾಗಿದ್ದು, ಮುಂದಿನ ದಿನಗಳಲ್ಲಿ ಕ್ರಿಕೆಟ್‍ನ ಐಪಿಎಲ್ ಹಾಗೂ ಕಬ್ಬಡಿ ಕೆಪಿಎಲ್ ಮಾದರಿಯಲ್ಲಿ ಕೊಕ್ಕೊವನ್ನು ದೊಡ್ಡ ಹಂತದಲ್ಲಿ ನಡೆಸಲಾಗುವುದು ಎಂದು ರಾಷ್ಟ್ರೀಯ ಕೊಕ್ಕೊ ಸಂಸ್ಥೆ ಪ್ರಧಾನ ಕಾರ್ಯದರ್ಶಿ ಎಂ.ಎಸ್.ತ್ಯಾಗಿ ತಿಳಿಸಿದರು. ನಗರದ ಕಲ್ಪತರು ಕ್ರೀಡಾಂಗಣದಲ್ಲಿ ತಿಪಟೂರು ಸ್ಫೂರ್ಟ್ಸ್‌ ಕ್ಲಬ್‌ನಿಂದ ನಡೆದ 33ನೇ ರಾಷ್ಟ್ರೀಯ ಸಬ್ ಜೂನಿಯರ್ ಬಾಲಕ-ಬಾಲಕಿಯರ ಹೊನಲು ಬೆಳಕಿನ ಕೊಕ್ಕೊ ಪಂದ್ಯಾವಳಿಗೆ ಬುಧವಾರ ಚಾಲನೆ ನೀಡಿ ಮಾತನಾಡಿದರು. ಜನವರಿಯಲ್ಲಿ ಜಾರ್ಖಂಡ್‌ನಲ್ಲಿ ಐಪಿಎಲ್ ರೀತಿಯಲ್ಲಿ ಕೊಕ್ಕೊ ಪಂದ್ಯಾವಳಿ ನಡೆಸಲಾಗುವುದು ಎಂದು ಹೇಳಿದರು. ತಿಪಟೂರು ಸ್ಫೂರ್ಟ್ಸ್‌ ಕ್ಲಬ್ ಅಧ್ಯಕ್ಷ ಲೋಕೇಶ್ವರ್ ಮಾತನಾಡಿ, ಕ್ರೀಡಾಪಟುಗಳು ಕ್ರೀಡಾಂಗಣಕ್ಕೆ ಬರುವ ಕ್ರೀಡಾಸಕ್ತರಿಗೆ ಉತ್ತಮ ಮನರಂಜನೆ ನೀಡಿ, ಕ್ರೀಡಾಕೂಟದ ಯಶಸ್ವಿಗೆ ಕಾರಣರಾಗಬೇಕು ಎಂದರು. ಕೊಕ್ಕೊ ತಂಡಗಳನ್ನು ಗ್ರಾಮದೇವತೆ ಕೆಂಪಮ್ಮದೇವಿ ದೇವಸ್ಥಾನದಿಂದ ಟ್ರ್ಯಾಕ್ಟರ್ ಮೂಲಕ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆಯಲ್ಲಿ ಕಲ್ಪತರು ಕ್ರೀಡಾಂಗಣಕ್ಕೆ ಕರೆತರಲಾಯಿತು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.