ಸತತ ಮೂರನೇ ಬಾರಿಗೆ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ನದಿ ಭಟ್ಟ ಜೊಯಿಡಾ: ಹಳಿಯಾಳದಲ್ಲಿ ಈಚೆಗೆ ನಡೆದ ಶಿರಸಿ ಶೈಕ್ಷಣಿಕ ಜಿಲ್ಲಾ ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ಇಲಾಖಾ ಕ್ರೀಡಾಕೂಟದ ಚದುರಂಗ ಸ್ಪರ್ಧೆಯಲ್ಲಿ ತಾಲ್ಲೂಕಿನ ಬಾಪೇಲಿಕ್ರಾಸ್ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ನದಿ ನರಸಿಂಹ ಭಟ್ಟ ಪ್ರಥಮ ಸ್ಥಾನ ಪಡೆದು ಸತತ ಮೂರನೇ ಬಾರಿಗೆ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಕ್ಷೇತ್ರ ಶಿಕ್ಷಣಾಧಿಕಾರಿ ಬಶೀರ್ ಅಹ್ಮದ್ ಶೇಖ್, ದೈಹಿಕ ಶಿಕ್ಷಣ ಪರಿವೀಕ್ಷಕ ಗೋವಿಂದ ಅಂಬಿಗ, ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ರಾಘವೇಂದ್ರ ಭಾಗ್ವತ್, ಸದಸ್ಯರು, ಶಾಲಾ ಮುಖ್ಯ ಶಿಕ್ಷಕರಾದ ಸುಜಾತಾ ಶೆಟ್ಟಿ ಹರ್ಷ ವ್ಯಕ್ತಪಡಿಸಿದ್ದಾರೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.