ಕರ್ನಾಟಕ ಟೇಬಲ್ ಟೆನಿಸ್ ಸಂಸ್ಥೆ: ಅಧ್ಯಕ್ಷರಾಗಿ ರಕ್ಷಾ ರಾಮಯ್ಯ ಆಯ್ಕೆ ಧಾರವಾಡ: ಕರ್ನಾಟಕ ಟೇಬಲ್ ಟೆನಿಸ್ ಸಂಸ್ಥೆಯ (ಕೆಟಿಟಿಎ) ಅಧ್ಯಕ್ಷರಾಗಿ ಯುವ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಎಂ.ಎಸ್. ರಕ್ಷಾ ರಾಮಯ್ಯ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಅವರು ಇಲ್ಲಿಯವರೆಗೆ ಅಧ್ಯಕ್ಷರಾಗಿದ್ದರು. ನಗರದ ಜಿಮಖಾನಾ ಕ್ಲಬ್‌ನಲ್ಲಿ ಭಾನುವಾರ ಚುನಾವಣೆ ನಡೆಯಿತು. ಮುಂದಿನ ನಾಲ್ಕು ವರ್ಷಗಳ ಅವಧಿಗೆ ಪದಾಧಿಕಾರಿಗಳ ಆಯ್ಕೆ ನಡೆಯಿತು. ಕಾರ್ಯಾಧ್ಯಕ್ಷರಾಗಿ ರಮೇಶ್‌ ಶಾಸ್ತ್ರಿ, ಉಪಾಧ್ಯಕ್ಷರಾಗಿ ರೋಹಿತ್‌ ಆರ್‌, ಶಿವಕುಮಾರ್‌ ಎಂ.ಕೆ, ಗೌತಮ್‌ ಶೆಟ್ಟಿ, ವಾದಿರಾಜ್‌ ಎಸ್‌. ಕಟ್ಟಿ ಹಾಗೂ ಆರ್‌.ಕೆ.ಜಯಚಂದ್ರ ರಾವ್‌ ಆಯ್ಕೆಯಾಗಿದ್ಧಾರೆ. ಕಾರ್ಯದರ್ಶಿಯಾಗಿ ಕೆ.ಆರ್‌.ಮಂಜುನಾಥ್‌, ಜಂಟಿ ಕಾರ್ಯದರ್ಶಿಗಳಾಗಿ ರವಿಕುಮಾರ್‌ ಎಸ್‌.ನಾಯಕ, ಜಿ.ಎ.ಅಂಬೇಕರ, ತಾಹಿರ್‌ ಸನದಿ, ಖಜಾಂಚಿಯಾಗಿ ಶ್ಯಾಮ್‌ ಬೈಲೂರ್ ಆಯ್ಕೆಯಾಗಿದ್ಧಾರೆ. ‘ಟೇಬಲ್‌ ಟೆನಿಸ್‌ ತರಬೇತಿಯಲ್ಲಿ ಸುಧಾರಣೆ, ಕರ್ನಾಟಕದಲ್ಲಿ ರಾಜ್ಯ ಮತ್ತು ರಾಷ್ಟ್ರಮಟ್ಟದ ಟೇಬಲ್‌ ಟೆನಿಸ್‌ ಟೂರ್ನಿ ಆಯೋಜನೆ, ಸಾಮಾನ್ಯ ಜನರಿಗೂ ಈ ಆಟವನ್ನು ತಲುಪುವಂತೆ ಮಾಡುತ್ತೇವೆ. ಪದಾಧಿಕಾರಿಗಳೊಂದಿಗೆ ಚರ್ಚಿಸಿ ಈ ನಿಟ್ಟಿನಲ್ಲಿ ಕ್ರಮವಹಿಸುತ್ತೇನೆ’ ಎಂದು ರಕ್ಷಾ ರಾಮಯ್ಯ ‘ಪ್ರಜಾವಾಣಿ’ಗೆ ತಿಳಿಸಿದರು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.