ನಮ್ಮ ಕುಟುಂಬದವರು ಡಬ್ಲ್ಯುಎಫ್‌ಐ ಚುನಾವಣೆಗೆ ಸ್ಪರ್ಧಿಸುವುದಿಲ್ಲ: ಬ್ರಿಜ್ ಭೂಷಣ್ ನವದೆಹಲಿ: ಭಾರತೀಯ ಕುಸ್ತಿ ಫೆಡರೇಷನ್‌ (ಡಬ್ಲ್ಯುಎಫ್‌ಐ) ಚುನಾವಣೆಗೆ ನಮ್ಮ ಕುಟುಂಬದವರು ಸ್ಪರ್ಧಿಸುವುದಿಲ್ಲ ಎಂದು ಫೆಡರೇಷನ್‌ನ ನಿರ್ಗಮಿತ ಅಧ್ಯಕ್ಷ, ಬಿಜೆಪಿ ಸಂಸದ ಬ್ರಿಜ್‌ ಭೂಷಣ್‌ ಸಿಂಗ್‌ ಸ್ಪಷ್ಟಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕುಸ್ತಿ ಫೆಡರೇಷನ್‌ ಚುನಾವಣೆಗೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದ್ದು, ನಮ್ಮ ಕುಟುಂಬದಿಂದ ಯಾರೂ ಕೂಡ ನಾಮಪತ್ರ ಸಲ್ಲಿಸುತ್ತಿಲ್ಲ’ ಎಂದು ಹೇಳಿದ್ದಾರೆ. # | : , " ’ ( , )... ." ../J1dSNulZG1 ಚುನಾವಣೆಗೆ ಸ್ಪರ್ಧಿಸಲಿರುವ ತಮ್ಮ ನಿಷ್ಠ ಗುಂಪಿನ ಅಭ್ಯರ್ಥಿಗಳ ಹೆಸರುಗಳನ್ನು ಪ್ರಕಟಿಸಲಾಗುವುದು ಎಂದು ಸೋಮವಾರ ಬ್ರಿಜ್‌ಭೂಷಣ್‌ ಸಿಂಗ್‌ ಹೇಳಿದ್ದರು. ಡಬ್ಲ್ಯುಎಫ್‌ಐಗೆ ಆಗಸ್ಟ್‌ 12ರಂದು ಚುನಾವಣೆ ನಿಗದಿ ಆಗಿದೆ. ಬ್ರಿಜ್‌ಭೂಷಣ್‌, ತಮ್ಮ ಪರವಾಗಿರುವ ರಾಜ್ಯ ಕುಸ್ತಿ ಸಂಸ್ಥೆಗಳ ಪ್ರತಿನಿಧಿಗಳ ಜತೆ ಭಾನುವಾರ ಸಭೆ ನಡೆಸಿದ್ದರು. ಡಬ್ಲ್ಯುಎಫ್‌ಐ ಮಾನ್ಯತೆ ಹೊಂದಿರುವ 25 ರಾಜ್ಯ ಕುಸ್ತಿ ಸಂಸ್ಥೆಗಳಲ್ಲಿ 22 ಸಂಸ್ಥೆಗಳ ಪ್ರತಿನಿಧಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು. ಬ್ರಿಜ್‌ ಭೂಷಣ್ ಮತ್ತು ಅವರ ಪುತ್ರ ಕರಣ್ ಈ ಬಾರಿ ಕಣದಲ್ಲಿರುವುದಿಲ್ಲ. ಬ್ರಿಜ್‌ಭೂಷಣ್‌ ಈಗಾಗಲೇ 12 ವರ್ಷ ಅಧಿಕಾರ ಪೂರೈಸಿರುವ ಕಾರಣ ಸ್ಪರ್ಧಿಸುವಂತಿಲ್ಲ. ಅವರ ಅಳಿಯ ವಿಶಾಲ್‌ ಸಿಂಗ್‌ ಕೂಡಾ ಸ್ಪರ್ಧಿಸದಿರಲು ನಿರ್ಧರಿಸಿದ್ದಾರೆ. ಬ್ರಿಜ್‌ ಭೂಷಣ್ ಅವರು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದಾರೆ. ಇದನ್ನೂ ಓದಿ... ಬ್ರಿಜ್‌ಭೂಷಣ್‌ ಸಿಂಗ್‌ಗೆ ಮಧ್ಯಂತರ ಜಾಮೀನು ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.