ಪ್ಯಾರಿಸ್‌ ಒಲಿಂಪಿಕ್ಸ್‌: ಭಾರತಕ್ಕೆ ಮತ್ತೊಂದು ಪದಕ– ಏರ್ ಪಿಸ್ತೂಲ್‌ನಲ್ಲಿ ಕಂಚು ಪ್ಯಾರಿಸ್‌: 10 ಮೀಟರ್ ಏರ್ ಪಿಸ್ತೂಲ್ ಮಿಶ್ರ ತಂಡ ವಿಭಾಗದಲ್ಲಿ ಮನು ಭಾಕರ್ ಮತ್ತು ಸರಬ್ಜೋತ್ ಸಿಂಗ್ ಜೋಡಿ ಕಂಚಿನ ಪದಕ ಗೆದ್ದಿದೆ. ಆ ಮೂಲಕ ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ ಭಾರತದ ಪದಕ ಪಟ್ಟಿಗೆ ಮತ್ತೊಂದು ಕಂಚು ಸೇರ್ಪಡೆಯಾಗಿದೆ. ಇಂದು ನಡೆದ ಪೈಪೋಟಿಯಲ್ಲಿ ಮನು ಮತ್ತು ಸರಬ್ಜೋತ್ ಜೋಡಿ ದಕ್ಷಿಣ ಕೊರಿಯಾದ ಯೆ ಜಿನ್ ಒಹ್ ಮತ್ತು ವೊನೊಹೊ ಲೀ ಅವರನ್ನು 579 ಸ್ಕೋರ್‌ಗಳಲ್ಲಿ ಸೋಲಿಸಿದ್ದಾರೆ. ಒಂದೇ ಒಲಿಂಪಿಕ್ಸ್‌ನಲ್ಲಿ ಎರಡು ಪದಕ ಜಯಿಸಿದ ಭಾರತದ ಮೊದಲ ಕ್ರೀಡಾಪಟು ಎಂಬ ಹೆಗ್ಗಳಿಕೆಗೆ ಮನು ಭಾಕರ್ ಪಾತ್ರರಾಗಿದ್ದಾರೆ. ಭಾನುವಾರ(ಜು.28) ನಡೆದ ಮಹಿಳೆಯರ 10 ಮೀಟರ್ ಏರ್ ಪಿಸ್ತೂಲ್‌ ವಿಭಾಗದಲ್ಲಿ ಮನು ಭಾಕರ್ ಕಂಚು ಗೆದ್ದಿದ್ದರು. ಒಲಿಂಪಿಕ್ಸ್ ಶೂಟಿಂಗ್‌ನಲ್ಲಿ ಪದಕ ಜಯಿಸಿದ ಭಾರತದ ಮೊದಲ ಮಹಿಳೆ ಮನು ಆಗಿದ್ದಾರೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.