2024: ಭಾರತೀಯರಿಗಾಗಿ 'ಒಲಿಂಪಿಕ್ ಖೇಲ್' ವಾಟ್ಸ್‌ಆ್ಯಪ್ ಚಾನೆಲ್ ಬಿಡುಗಡೆ ಬೆಂಗಳೂರು: ಪ್ಯಾರಿಸ್ ಒಲಿಂಪಿಕ್ಸ್ ಅಧಿಕೃತ ಚಾಲನೆಗೆ ಕ್ಷಣಗಣನೆ ಆರಂಭವಾಗಿರುವಂತೆಯೇ ಅಂತರರಾಷ್ಟ್ರೀಯ ಒಲಿಂಪಿಕ್ ಸಮಿತಿಯು (ಐಒಸಿ), ಭಾರತೀಯ ಅಭಿಮಾನಿಗಳಿಗಾಗಿ 'ಒಲಿಂಪಿಕ್ ಖೇಲ್' ವಾಟ್ಸ್‌ಆ್ಯಪ್ ಚಾನೆಲ್ ಅನ್ನು ಬಿಡುಗಡೆಗೊಳಿಸಿದೆ. ಒಲಿಂಪಿಕ್ ಖೇಲ್ ವಾಟ್ಸ್‌ಆ್ಯಪ್ ಚಾನೆಲ್ ಮೂಲಕ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳ ಸ್ಪರ್ಧೆ ಹಾಗೂ ಫಲಿತಾಂಶಗಳ ಬಗ್ಗೆ ತಾಜಾ ಹಾಗೂ ನಿಖರ ಮಾಹಿತಿಗಳನ್ನು ಪಡೆಯಬಹುದಾಗಿದೆ. ಇದರಲ್ಲಿ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಪಾಲ್ಗೊಳ್ಳುತ್ತಿರುವ ಭಾರತೀಯ ಕ್ರೀಡಾಪಟುಗಳ ತೆರೆಮರೆಯ ವಿಶೇಷತೆಗಳು ಒಳಗೊಂಡಿರಲಿವೆ. ಪ್ಯಾರಿಸ್ ಒಲಿಂಪಿಕ್ಸ್‌ಗೆ ನಾಳೆ (ಜುಲೈ 26) ಅಧಿಕೃತ ಚಾಲನೆ ಸಿಗಲಿದೆ. ಈಗಾಗಲೇ ಕೆಲವು ವಿಭಾಗದ ಸ್ಪರ್ಧೆಗಳು ಆರಂಭವಾಗಿವೆ. ಭಾರತದ 117 ಕ್ರೀಡಾಪಟುಗಳು ಈ ಬಾರಿಯ ಒಲಿಂಪಿಕ್ಸ್‌ನಲ್ಲಿ ಭಾಗವಹಿಸುತ್ತಿದ್ದಾರೆ. ಒಲಿಂಪಿಕ್ ಖೇಲ್ ವಾಟ್ಸ್ಆ್ಯಪ್ ಚಾನೆಲ್ ಸೇರಲು ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ... ://..//0029VadgKiVFXUuUf9WcJG3j ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.