ಫೆನ್ಸಿಂಗ್: ಸೆಜಲ್‌ ಮಿಂಚು, ಭಾರತ ತಂಡಕ್ಕೆ ಬೆಳ್ಳಿ ಪದಕ ಬೆಂಗಳೂರು: ಇಲ್ಲಿನ ಆರ್ಮಿ ಪಬ್ಲಿಕ್ ಸ್ಕೂಲ್‌ನ ಸೆಜಲ್ ಗುಲಿಯಾ ಅವರನ್ನು ಒಳಗೊಂಡ ಭಾರತ ತಂಡವು ನ್ಯೂಜಿಲೆಂಡ್‌ನ ಕ್ರೈಸ್ಟ್‌ಚರ್ಚ್‌ನಲ್ಲಿ ನಡೆದ ಕಾಮನ್‌ವೆಲ್ತ್ ಕೆಡೆಟ್ ಫೆನ್ಸಿಂಗ್ ಚಾಂಪಿಯನ್‌ಷಿಪ್‌ನಲ್ಲಿ ಬೆಳ್ಳಿ ಪದಕ ಜಯಿಸಿತು. ಜುಲೈ 12ರಿಂದ 14ರವರೆಗೆ ನಡೆದ ಟೂರ್ನಿಯ ಫೈನಲ್‌ನಲ್ಲಿ ಇಂಗ್ಲೆಂಡ್‌ ತಂಡದ ವಿರುದ್ಧ ಪೈಪೋಟಿ ನೀಡಿದ ಭಾರತ ಕೂದಲೆಳೆಯ ಅಂತರದಲ್ಲಿ ಚಿನ್ನವನ್ನು ತಪ್ಪಿಸಿಕೊಂಡಿತು. ಟೂರ್ನಿಯುದ್ದಕ್ಕೂ ಸೆಜಲ್‌ ಉತ್ತಮ ಆಟ ಪ್ರದರ್ಶಿಸಿದರು. ಅವರು ರಾಷ್ಟ್ರಮಟ್ಟದ ಸ್ಪರ್ಧೆಗಳಲ್ಲಿ ಕರ್ನಾಟಕವನ್ನು ಪ್ರತಿನಿಧಿಸುತ್ತಾರೆ. ‌ ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.