ವಿಶ್ವ ಮಾಸ್ಟರ್ಸ್ ಅಥ್ಲೆಟಿಕ್ಸ್‌ಗೆ ಯೋಗೇಂದ್ರ ಆಯ್ಕೆ ಮೈಸೂರು: ಅಂತರರಾಷ್ಟ್ರೀಯ ಅಥ್ಲೀಟ್‌, ಇಲ್ಲಿನ ಮೈಸೂರು ಅಥ್ಲೆಟಿಕ್ಸ್‌ ಕ್ಲಬ್ ಕಾರ್ಯದರ್ಶಿ ಎಂ. ಯೋಗೇಂದ್ರ ಆಗಸ್ಟ್‌ 13ರಿಂದ 25ರವರೆಗೆ ಸ್ವೀಡನ್‌ನ ಗೋತನ್‌ಬರ್ಗ್‌ನಲ್ಲಿ ನಡೆಯಲಿರುವ 25ನೇ ವಿಶ್ವ ಮಾಸ್ಟರ್ಸ್ ಅಥ್ಲೆಟಿಕ್‌ ಚಾಂಪಿಯನ್‌ಷಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ. ಅವರು ಚಾಂಪಿಯನ್‌ಷಿಪ್‌ನಲ್ಲಿ ಪುರುಷರ 60 ವರ್ಷ ಮೇಲ್ಪಟ್ಟವರ ವಿಭಾಗದಲ್ಲಿ 2 ಕಿ.ಮೀ. ಸ್ಟೀಪಲ್‌ ಚೇಸ್‌ನಲ್ಲಿ ಸ್ಪರ್ಧಿಸಲಿದ್ದಾರೆ. ಇದೇ ವರ್ಷ ಫೆಬ್ರುವರಿಯಲ್ಲಿ ಪುಣೆಯಲ್ಲಿ ನಡೆದ 44ನೇ ಮಾಸ್ಟರ್ಸ್ ಅಥ್ಲೆಟಿಕ್‌ ಚಾಂಪಿಯನ್‌ಷಿಪ್‌ನಲ್ಲಿ 2 ಕಿ.ಮೀ. ಸ್ಟೀಪಲ್‌ ಚೇಸ್‌ನಲ್ಲಿ ಚಿನ್ನದ ಪದಕ ಗೆಲ್ಲುವ ಮೂಲಕ ಅವರು ವಿಶ್ವಮಟ್ಟದ ಚಾಂಪಿಯನ್‌ಷಿಪ್‌ನಲ್ಲಿ ಪಾಲ್ಗೊಳ್ಳುವ ಅವಕಾಶ ಪಡೆದಿದ್ದಾರೆ. ಯೋಗೇಂದ್ರ ಈವರೆಗೆ 9 ಬಾರಿ ವಿಶ್ವ ಮಾಸ್ಟರ್ಸ್ ಅಥ್ಲೆಟಿಕ್‌ ಚಾಂಪಿಯನ್‌ಷಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸಿದ್ದಾರೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.