ಟೇಕ್ವಾಂಡೊ: ವೇದಾಂತಗೆ ಕಂಚಿನ ಪದಕ ಬೆಂಗಳೂರು: ಕರ್ನಾಟಕದ ವೇದಾಂತ ಗಲಗಲಿ, ಮಲೇಷ್ಯಾದ ಕ್ವಾಲಾಲಂಪುರದಲ್ಲಿ ಇತ್ತೀಚೆಗೆ ನಡೆದ ಅಂತರರಾಷ್ಟ್ರೀಯ ಮುಕ್ತ ಟೇಕ್ವಾಂಡೊ ಚಾಂಪಿಯನ್‌ಷಿಪ್‌ನಲ್ಲಿ ಕಂಚಿನ ಪದಕ ಗೆದ್ದುಕೊಂಡಿದ್ದಾನೆ. ಹುಬ್ಬಳ್ಳಿ ಮೂಲದ ವೇದಾಂತ ಸದ್ಯ ಬೆಂಗಳೂರಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾನೆ. 9ರಿಂದ 11 ವರ್ಷದೊಳಗಿನವರ ವಿಭಾಗದಲ್ಲಿ ಸ್ಪರ್ಧಿಸಿದ್ದ ವೇದಾಂತ್‌ಗೆ ಪದಕಒಲಿದಿದೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.