ಲಾನ್‌ ಬಾಲ್ಸ್: ಲವ್ಲಿ–ಸೈಕಿಯಾಗೆ ಸೋಲು ಬರ್ಮಿಂಗ್‌ಹ್ಯಾಮ್: ಭಾರತದ ಲವ್ಲಿ ಚೌಬೆ ಮತ್ತು ನಯನ್ಮಣಿ ಸೈಕಿಯಾ ಅವರು ಲಾನ್‌ ಬಾಲ್ಸ್‌ ಟೂರ್ನಿಯ ಮಹಿಳೆಯರ ಡಬಲ್ಸ್‌ ವಿಭಾಗದ ಕ್ವಾರ್ಟರ್‌ ಫೈನಲ್‌ನಲ್ಲಿ ಸೋತರು. ಶುಕ್ರವಾರ ನಡೆದ ಪಂದ್ಯದಲ್ಲಿ ಇಂಗ್ಲೆಂಡ್‌ನ ಸೋಫಿ ಟೊಚಾರ್ಡ್– ಆಮಿ ಫರೋವ ಅವರು 18–14 ರಲ್ಲಿ ಭಾರತದ ಜೋಡಿಯನ್ನು ಮಣಿಸಿ ಸೆಮಿಫೈನಲ್‌ಗೇರಿದರು. ಲಾನ್‌ ಬಾಲ್ಸ್‌ನಲ್ಲಿ ಭಾರತಕ್ಕೆ ಐತಿಹಾಸಿಕ ಚಿನ್ನ ಗೆದ್ದ ತಂಡದಲ್ಲಿದ್ದ ಲವ್ಲಿ ಮತ್ತು ಸೈಕಿಯಾ ಮೊದಲು 5–2 ರಲ್ಲಿ ಹಾಗೂ ಬಳಿಕ 8–6 ರಲ್ಲಿ ಮುನ್ನಡೆ ಗಳಿಸಿದ್ದರು. ಆದರೆ ಈ ಮೇಲುಗೈಯನ್ನು ಸದುಪಯೋಗಪಡಿಸಿಕೊಳ್ಳಲು ಆಗಲಿಲ್ಲ. ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್‌– ನ್ಯೂಜಿಲೆಂಡ್‌ ಹಾಗೂ ಆಸ್ಟ್ರೇಲಿಯಾ– ಮಲೇಷ್ಯಾ ತಂಡಗಳು ಪೈಪೋಟಿ ನಡೆಸಲಿವೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.